alex Certify
ಕನ್ನಡ ದುನಿಯಾ       Mobile App
       

Kannada Duniya

ಜೆಡಿಎಸ್ ಅಭ್ಯರ್ಥಿಗಳ ಪರ ಗೀತಾ ಶಿವರಾಜ್ ಕುಮಾರ್ ಪ್ರಚಾರ

ಶಿವಮೊಗ್ಗ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರ ಗೀತಾ ಶಿವರಾಜ್ ಕುಮಾರ್ ಪ್ರಚಾರ ನಡೆಸಲಿದ್ದಾರೆ ಎಂದು ಶಾಸಕ ಮಧುಬಂಗಾರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗೀತಾ ಶಿವರಾಜ್ ಕುಮಾರ್ ಮಾ.19 ರಿಂದ 4 ದಿನ ಮೊದಲ ಹಂತದ ಜಿಲ್ಲಾ ಪ್ರವಾಸ ನಡೆಸುವರು. ತೀರ್ಥಹಳ್ಳಿ, ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಭದ್ರಾವತಿ, ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. 2ನೇ ಹಂತದಲ್ಲಿ ಕಾರವಾರ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ನಡೆಸಲಿದ್ದಾರೆ ಎಂದರು.

ಚಿತ್ರನಟ ಶಿವರಾಜ್ ಕುಮಾರ್ ಪಕ್ಷಾತೀತ ನಾಯಕರಾಗಿದ್ದಾರೆ. ಅವರನ್ನು ಯಾವುದೇ ಕಾರಣಕ್ಕೂ ಪ್ರಚಾರಕ್ಕೆ ಎಳೆದು ತರುವುದಿಲ್ಲ ಎಂದ ಮಧುಬಂಗಾರಪ್ಪ, ಮಾ.25 ರ ನಂತರ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಜೊತೆಗೆ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಮುಖಂಡರುಗಳಾದ ಹೆಚ್. ವಿಶ್ವನಾಥ್, ಪಿ.ಜಿ.ಆರ್. ಸಿಂದ್ಯಾ, ವೈ.ಎಸ್.ವಿ.ದತ್ತಾ, ಬಸವರಾಜ್ ಹೊರಟ್ಟಿ, ಶಶಿಭೂಷಣ್ ಹೆಗ್ಡೆ ಮತ್ತಿತರರು ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಜೆಡಿಎಸ್ ತನ್ನ 126 ಕ್ಷೇತ್ರಕ್ಕೆ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಶೇ.80 ರಿಂದ 90 ಭಾಗ ಗೆಲುವು ಸಾಧಿಸುವ ಅಭ್ಯರ್ಥಿಗಳನ್ನೇ ವರಿಷ್ಟರು ಕಣಕ್ಕೆ ಇಳಿಸಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

ಮುಂದಿನ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಸ್ವತಂತ್ರವಾಗಿ ಚುನಾವಣೆ ಎದುರಿಸುತ್ತದೆ ಎಂದು ಪಕ್ಷದ ವರಿಷ್ಟರೇ ಸ್ಪಷ್ಟಪಡಿಸಿರುವುದರಿಂದ ಹೊಂದಾಣಿಕೆಯ ಮಾತೇ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...