alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಕೊಡಗು ಬಂದ್

Locked shutters of Shimla shops on budy Mall Road on Saturday during bandh to protest against "cow Slaughter" case at Nerwa in Chopal area of Shimla district. Photo by : Amit Kanwar

ಮಡಿಕೇರಿ: ಮಂಗಳೂರು ಐ.ಜಿ.ಕಚೇರಿ ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣವನ್ನು ಸಿ.ಬಿ.ಐ. ತನಿಖೆಗೆ ವಹಿಸಬೇಕು ಹಾಗೂ ಸಚಿವ ಕೆ.ಜೆ.ಜಾರ್ಜ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಇಂದು ಮಡಿಕೇರಿ ಬಂದ್ ಗೆ ಕರೆ ನೀಡಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಿ.ಜೆ.ಪಿ., ಎ.ಬಿ.ವಿ.ಪಿ., ಬಜರಂಗದಳ ಸೇರಿದಂತೆ ವಿವಿಧ ಸಂಘಟನೆಗಳು ಪಕ್ಷಗಳು ಬಂದ್ ಗೆ ಬೆಂಬಲ ನೀಡಿದ್ದು, ಬೆಳಿಗ್ಗೆಯಿಂದಲೇ ಕೊಡಗು ಜಿಲ್ಲೆ ಬಂದ್ ಆಗಿದೆ. ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆಯಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ಸರ್ಕಾರಿ ಹಾಗೂ ಖಾಸಗಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಆಟೋ ಸಂಚಾರವೂ ಇಲ್ಲವಾಗಿದ್ದು, ಬೆಳಿಗ್ಗೆಯೇ ಕೆಲವು ಕಡೆಗಳಲ್ಲಿ ರಸ್ತೆಯಲ್ಲಿ, ಸರ್ಕಲ್ ಗಳಲ್ಲಿ ಟಯರ್ ಗಳಿಗೆ ಬೆಂಕಿ ಹಚ್ಚಲಾಗಿದೆ.

ಪ್ರಮುಖ ವೃತ್ತದಲ್ಲಿ ಸಭೆ ಸೇರಿದ ಪ್ರತಿಭಟನಾಕಾರರು ಸರ್ಕಾರ ಹಾಗೂ ಸಚಿವ ಜಾರ್ಜ್ ವಿರುದ್ಧ ಘೋಷಣೆ ಕೂಗಿದ್ದಾರೆ. ಡಿ.ವೈ.ಎಸ್.ಪಿ.ಗಣಪತಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಹೆಸರಿಸಿರುವ ಸಚಿವ ಹಾಗೂ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಬಂದ್ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...