alex Certify
ಕನ್ನಡ ದುನಿಯಾ       Mobile App
       

Kannada Duniya

ಮಡಿಕೇರಿಯಲ್ಲಿ ಬೆದರಿಸಿ ದಿನಸಿ ಪಡೆದ ನಕ್ಸಲರು…?

ಮಡಿಕೇರಿ: ಮಲೆನಾಡು –ಕರಾವಳಿ ಪ್ರದೇಶದಲ್ಲಿ ಇತ್ತೀಚೆಗೆ ಕಾಣಿಸಿಕೊಂಡು ಮರೆಯಾಗಿದ್ದ ನಕ್ಸಲರು, ನಿನ್ನೆ ಮಡಿಕೇರಿ ತಾಲ್ಲೂಕಿನ ಸಂಪಾಜೆ ಗುಡ್ಡೆಗದ್ದೆ ಬಳಿ ಕಾಣಿಸಿಕೊಂಡಿದ್ದಾರೆ.

ಗಣೇಶ್ ಎಂಬುವವರ ಮನೆಗೆ ಭೇಟಿ ನೀಡಿದ್ದ 3 ಮಂದಿ ನಕ್ಸಲರ ತಂಡ ಬೆದರಿಸಿ ದಿನಸಿ, ಅಕ್ಕಿ, ಸೋಪು ಪಡೆದುಕೊಂಡು ತೆರಳಿದೆ. ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ನಡೆಸಲಾಗಿದೆ. ಇತ್ತೀಚೆಗಷ್ಟೇ ಶಿರಾಡಿ ಬಳಿ ನಕ್ಸಲರು ಭೇಟಿ ನೀಡಿದ್ದು, ಅಡುಗೆ ಸಾಮಗ್ರಿ ಪಡೆದುಕೊಂಡು ತೆರಳಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...