alex Certify
ಕನ್ನಡ ದುನಿಯಾ       Mobile App
       

Kannada Duniya

12 ನೇ ದಿನಕ್ಕೆ ಕಾಲಿಟ್ಟ ಆದಿವಾಸಿಗಳ ಹೋರಾಟ

adivasi

ಮಡಿಕೇರಿ: 577 ಆದಿವಾಸಿ ಕುಟುಂಬಗಳನ್ನು ತೆರವುಗೊಳಿಸಿರುವುದನ್ನು ವಿರೋಧಿಸಿ, ನಡೆಯುತ್ತಿರುವ ಹೋರಾಟ 12 ನೇ ದಿನಕ್ಕೆ ಕಾಲಿಟ್ಟಿದೆ.

ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಡ್ಡಳ್ಳಿಯ ಮೀಸಲು ಅರಣ್ಯದಿಂದ ಆದಿವಾಸಿಗಳನ್ನು ತೆರವುಗೊಳಿಸಲಾಗಿದೆ. ಇದನ್ನು ವಿರೋಧಿಸಿ ರಸ್ತೆ ಬದಿಯಲ್ಲೇ ಹಗಲು, ರಾತ್ರಿ ನಿರಂತರ ಹೋರಾಟ ನಡೆಸಲಾಗುತ್ತಿದೆ.

ತೆರವುಗೊಳಿಸಿದ ಸ್ಥಳದಲ್ಲಿಯೇ ನಿವಾಸಿಗಳಿಗೆ ವಸತಿ, ಮೂಲ ಸೌಕರ್ಯ ಕಲ್ಪಿಸಬೇಕೆಂದು ಹೋರಾಟದಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಹಿರಿಯ ವಕೀಲ ಎ.ಕೆ. ಸುಬ್ಬಯ್ಯ, ನಟ ಚೇತನ್, ಹೋರಾಟಗಾರ ನಿರ್ವಾಣಪ್ಪ ಸೇರಿದಂತೆ ಹಲವಾರು ಹೋರಾಟಗಾರರು, ಸಂಘಟನೆಗಳ ಮುಖಂಡರು ಆದಿವಾಸಿಗಳಿಗೆ ಬೆಂಬಲ ನೀಡಿದ್ದಾರೆ.

ಕಳೆದ 12 ದಿನಗಳಿಂದ ರಸ್ತೆ ಬದಿಯಲ್ಲೇ ಹೋರಾಟ ನಡೆಸುತ್ತಿದ್ದರೂ, ಜಿಲ್ಲಾಡಳಿತ ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...