alex Certify
ಕನ್ನಡ ದುನಿಯಾ       Mobile App
       

Kannada Duniya

ದಿಡ್ಡಳ್ಳಿ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ

img-20161221-wa0030

ಮಡಿಕೇರಿ: ಭೂಮಿ ಮತ್ತು ವಸತಿಗಾಗಿ ಆದಿವಾಸಿ ಕುಟುಂಬದವರು, ನಡೆಸುತ್ತಿರುವ ಹೋರಾಟದಿಂದಾಗಿ ವಿರಾಜಪೇಟೆ ತಾಲ್ಲೂಕಿನ ದಿಡ್ಡಳ್ಳಿ ಗ್ರಾಮ ಭಾರೀ ಸುದ್ದಿಯಲ್ಲಿದೆ.

ಹೋರಾಟ ನಡೆಯುತ್ತಿರುವ ದಿಡ್ಡಳ್ಳಿ ಗ್ರಾಮದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಸುಳಿದಾಡುತ್ತಿದ್ದು, ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವ ಶಂಕೆ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಹೇಳಲಾಗಿದೆ.

ಈ ಪ್ರದೇಶದಲ್ಲಿ ನಕ್ಸಲರು ಸಂಚರಿಸುತ್ತಿದ್ದಾರೆ ಎಂಬ ಶಂಕೆಯಿಂದ ಎ.ಎನ್.ಎಫ್.  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.  ಹೋರಾಟದ ಸ್ಥಳದಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಲು ಮುಂದಾಗಿದೆ.

ಎ.ಎನ್.ಎಫ್. ಈ ರೀತಿ ಅನುಮಾನದಿಂದ ಕಾಣುತ್ತಿರುವುದು ಹೋರಾಟವನ್ನು ದಿಕ್ಕು ತಪ್ಪಿಸುವ ಯತ್ನವಾಗಿದೆ ಎಂದು ಆದಿವಾಸಿ ಸಮುದಾಯದ ಮುಖಂಡ ಅಪ್ಪಾಜಿ ದೂರಿದ್ದಾರೆ.

ಸ್ಥಳಕ್ಕೆ ಪೊಲೀಸರನ್ನು ನಿಯೋಜಿಸಿ, ಬೆದರಿಕೆ ಮೂಲಕ ಹೋರಾಟವನ್ನು ಹತ್ತಿಕ್ಕುವ ಯತ್ನ ನಡೆಸಲಾಗುತ್ತಿದೆ. ನಮ್ಮ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...