alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಸಕ ಅಪ್ಪಚ್ಚು ರಂಜನ್ ಸೇರಿ ಹಲವರು ಅರೆಸ್ಟ್

ಮಡಿಕೇರಿ: ಟಿಪ್ಪು ಜಯಂತಿ ವಿರೋಧಿಸಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳೆದ 2 ವರ್ಷಗಳಲ್ಲಿ ಟಿಪ್ಪು ಜಯಂತಿ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಟಿಪ್ಪು ಜಯಂತಿ ವಿರೋಧಿಸಿ ಬಿ.ಜೆ.ಪಿ. ಮತ್ತು ಸಂಘ ಪರಿವಾರದ ಸಂಘಟನೆಗಳು ಕೊಡಗು ಜಿಲ್ಲಾ ಬಂದ್ ಗೆ ಕರೆ ನೀಡಿವೆ.

ಮಡಿಕೇರಿ ತಾಲ್ಲೂಕಿನ ಕಾಲೂರಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಗದಾಳ್ – ಸೋಮವಾರಪೇಟೆ ರಸ್ತೆಯಲ್ಲಿ ಮರಗಳನ್ನು ಕಡಿದು ರಸ್ತೆಗೆ ಅಡ್ಡಲಾಗಿ ಹಾಕಲಾಗಿದ್ದು, ಕೆಲಕಾಲ ಸಂಚಾರಕ್ಕೆ ಸಮಸ್ಯೆಯಾಗಿತ್ತು. ಪೊಲೀಸರು ರಸ್ತೆಗೆ ಹಾಕಲಾಗಿದ್ದ ಮರಗಳನ್ನು ತೆರವುಗೊಳಿಸಿದ್ದಾರೆ.

ಮಡಿಕೇರಿಯಲ್ಲಿ ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಶಾಸಕ ಅಪ್ಪಚ್ಚು ರಂಜನ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...