alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಪಿ.ಐ.ಗೆ ಬೆದರಿಕೆ ಹಾಕಿದ ಶಾಸಕನ ವಿರುದ್ಧ ಎಫ್.ಐ.ಆರ್.

magadi-ac-fir

ರಾಮನಗರ: ತಮ್ಮ ಬೆಂಬಲಿಗರೊಂದಿಗೆ ಪೊಲೀಸ್ ಠಾಣೆಗೆ ನುಗ್ಗಿ, ಸಿ.ಪಿ.ಐ. ಹಾಗೂ ಪಿ.ಎಸ್.ಐ.ಗೆ ಬೆದರಿಕೆ ಹಾಕಿದ್ದ ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ.

ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಅಯ್ಯಂಡಹಳ್ಳಿಯಲ್ಲಿ ಶಾಸಕರ ಬೆಂಬಲಿಗ ರಮೇಶ್ ಮೇಲೆ, ಕಾಂಗ್ರೆಸ್ ಕಾರ್ಯಕರ್ತನೊಬ್ಬ ಹಲ್ಲೆ ಮಾಡಿದ್ದು, ಕುದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆದರೆ, ಆರೋಪಿಯನ್ನು ಬಂಧಿಸಿಲ್ಲ ಎಂದು ಠಾಣೆಗೆ ಬಂದಿದ್ದ ಬಾಲಕೃಷ್ಣ, ಪೊಲೀಸ್ ಅಧಿಕಾರಿಗಳನ್ನೇ ಅವಾಚ್ಯ ಪದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ.

ಈ ಹಿನ್ನಲೆಯಲ್ಲಿ ಶಾಸಕ ಬಾಲಕೃಷ್ಣ ಸೇರಿದಂತೆ 17 ಮಂದಿ ವಿರುದ್ಧ ಕುದೂರು ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.

ಐ.ಪಿ.ಸಿ. ಸೆಕ್ಷನ್ 341, 353, 504, 506, 149 ರ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಾಲಕೃಷ್ಣ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕೇಳಲು ಹೋಗಿದ್ದೆ. ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿಲ್ಲ ಎಂದು ಹೇಳಿದ್ದಾರೆ.

ಶಾಸಕರ ಈ ವರ್ತನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ, ಶಾಸಕರಾದವರು ತಗ್ಗಿ ಬಗ್ಗಿ ನಡೆಯಬೇಕು. ಇಂತಹ ಘಟನೆ ನಡೆಯಬಾರದಿತ್ತು ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...