alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕದ ಮಧ್ಯಂತರ ಅರ್ಜಿ ತಿರಸ್ಕರಿಸಿದ ಟ್ರಿಬ್ಯುನಲ್

river decisonಕುಡಿಯುವ ನೀರಿಗಾಗಿ 7.56 ಟಿಎಂಸಿ ನೀರು ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೋರಿ ಕರ್ನಾಟಕ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಮಹದಾಯಿ ನ್ಯಾಯಾಧೀಕರಣ ತಿರಸ್ಕರಿಸುವ ಮೂಲಕ ರಾಜ್ಯಕ್ಕೆ ಹಿನ್ನಡೆಯಾಗಿದೆ. ಇದರಿಂದಾಗಿ ಉತ್ತರ ಕರ್ನಾಟಕ ಭಾಗದ ಜನತೆಗೆ ಭಾರೀ ಅನ್ಯಾಯವಾಗಿದೆ.

ಜಸ್ಟೀಸ್ ಜೆ.ಎಂ. ಪಾಂಚಾಲ್ ಅಧ್ಯಕ್ಷತೆಯ ಮಹದಾಯಿ ನ್ಯಾಯಾಧೀಕರಣ ಈ ಕುರಿತು ಇಂದು ತೀರ್ಪು ನೀಡಿದ್ದು, 7.56 ಟಿಎಂಸಿ ನೀರು ಬಳಸಿಕೊಳ್ಳಲು ಕರ್ನಾಟಕ ಮಾಡಿರುವ ಮನವಿಯನ್ನು ತಿರಸ್ಕರಿಸುವ ಮೂಲಕ ನೀರು ಬಳಕೆಗೆ ಅವಕಾಶ ನೀಡಲಾಗುವುದಿಲ್ಲವೆಂದು ಹೇಳಿದೆ.

ಕುಡಿಯುವ ನೀರಿಗಾಗಿ ಇದನ್ನು ಬಳಸಿಕೊಳ್ಳಲಾಗುವುದೆಂದು ಹೇಳಿದ್ದ ಕರ್ನಾಟಕ, ಜನರ ಕಷ್ಟವನ್ನು ಅರ್ಥ ಮಾಡಿಕೊಂಡು ಇದಕ್ಕೆ ಅವಕಾಶ ನೀಡಬೇಕೆಂದು ಮನವಿ ಮಾಡಿತ್ತು. ಇದೀಗ ಕರ್ನಾಟಕ ಮಧ್ಯಂತರ ಅರ್ಜಿ ತಿರಸ್ಕಾರಗೊಂಡಿರುವ ಕಾರಣ ಸುಪ್ರೀಂ ಕೋರ್ಟ್ ಮೊರೆ ಹೋಗುವಂತಾಗಿದೆ. ರಾಜ್ಯದ ವಿರುದ್ದ ತೀರ್ಪು ಹೊರ ಬೀಳುತ್ತಿದ್ದಂತೆಯೇ ಉತ್ತರ ಕರ್ನಾಟಕದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆಯಲ್ಲದೇ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...