alex Certify
ಕನ್ನಡ ದುನಿಯಾ       Mobile App
       

Kannada Duniya

ಮಹದಾಯಿ: ಕರ್ನಾಟಕ ವಿರುದ್ಧದ ಅರ್ಜಿ ಹಿಂಪಡೆದ ಗೋವಾ

ನವದೆಹಲಿ: ಮಹದಾಯಿ ನ್ಯಾಯಾಧೀಕರಣದಲ್ಲಿ ಕರ್ನಾಟಕದ ವಿರುದ್ಧ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಗೋವಾ ಸರ್ಕಾರ ಹಿಂಪಡೆದಿದೆ.

ಮಹದಾಯಿ ವಿಚಾರದಲ್ಲಿ ಕರ್ನಾಟಕ ಸರ್ಕಾರ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಗೋವಾ ಸರ್ಕಾರ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಕರ್ನಾಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ನ್ಯಾಯಾಂಗ ನಿಂದನೆ ಮಾಡಿಲ್ಲ. ಮಹದಾಯಿ ನದಿ ನೀರು ತಿರುವು ಮಾಡಿಲ್ಲ. ಜೊತೆಗೆ ಅರ್ಜಿಯ ವಿಚಾರಣೆ ನಡೆಸುವ ಅಧಿಕಾರ ಇಲ್ಲ ಎಂದು ಗೋವಾ ತಕರಾರಿಗೆ ಆಕ್ಷೇಪ ವ್ಯಕ್ತಪಡಿಸಿತ್ತು.

ಹೀಗಾಗಿ ಇಂದು ವಿಚಾರಣೆ ಆರಂಭವಾಗುತ್ತಿದ್ದಂತೆ ಗೋವಾ ಪರ ವಕೀಲರು ನ್ಯಾಯಾಂಗ ನಿಂದನೆ ಅರ್ಜಿ ವಾಪಸ್ ಪಡೆಯುವುದಾಗಿ ಹೇಳಿದ್ದಾರೆ. ಅರ್ಜಿ ಹಿಂಪಡೆಯಲು ನ್ಯಾಯಾಧಿಕರಣ ಅವಕಾಶ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...