alex Certify
ಕನ್ನಡ ದುನಿಯಾ       Mobile App
       

Kannada Duniya

‘ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ’

siddaramaia sun

ಬೆಂಗಳೂರು: ಮಹಾದಾಯಿ ನದಿ ನೀರು ಹಂಚಿಕೆ, ನ್ಯಾಯಾಧೀಕರಣದ ತೀರ್ಪು, ಕೈಗೊಳ್ಳಬೇಕಿರುವ ಕ್ರಮಗಳ ಕುರಿತಂತೆ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ ನಡೆಯಿತು.

ಸಭೆಯಲ್ಲಿ ಭಾಗವಹಿಸಿದ್ದ ರಾಜ್ಯದ ಸಂಸದರು, ಪಕ್ಷಗಳ ಅಧ್ಯಕ್ಷರು ಹಾಗೂ ಜನಪ್ರತಿನಿಧಿಗಳು, ಹಲವು ಸಲಹೆ ಸೂಚನೆ ನೀಡಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಹಾದಾಯಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಕುರಿತಾಗಿ ಹಿರಿಯ ವಕೀಲರಾದ ಎಫ್.ಎಸ್. ನಾರಿಮನ್ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಇದೇ ಆಗಸ್ಟ್ 16ರಂದು ಅವರೊಂದಿಗೆ ಚರ್ಚಿಸಿ, ಮುಂದಿನ ನಡೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಹಿರಿಯ ವಕೀಲರಾದ ನಾರಿಮನ್ ಅವರ ಮೇಲೆ ವಿಶ್ವಾಸವಿದೆ. ಅವರೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದ ಬಿ.ಎಸ್. ಯಡಿಯೂರಪ್ಪ ಅವರು, ರಾಜ್ಯದ ನಾಡಿನ ನೆಲ, ಜಲ ವಿಚಾರದಲ್ಲಿ ನಾವೆಲ್ಲಾ ಒಂದಾಗಿದ್ದೇವೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...