alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿಗೆ ಮುತ್ತಿಗೆ ಹಾಕುವ ಎಚ್ಚರಿಕೆ

ಮಹದಾಯಿ ನೀರು ಹಂಚಿಕೆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಧ್ಯ ಪ್ರವೇಶ ಮಾಡಬೇಕೆಂದು ಮಹದಾಯಿ ಹೋರಾಟಗಾರರು ಆಗ್ರಹಿಸಿದ್ದಾರೆ. ಒಂದು ವೇಳೆ ಫೆಬ್ರವರಿ 4 ರೊಳಗೆ ಪಿಎಂ, ಮಹದಾಯಿ ನೀರು ಹಂಚಿಕೆ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸದೇ ಹೋದಲ್ಲಿ ಪಿಎಂಗೆ ಮುತ್ತಿಗೆ ಹಾಕುವುದಾಗಿ ಮಹದಾಯಿ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.

ಪರಿವರ್ತನಾ ಸಮಾವೇಶದ ಹಿನ್ನೆಲೆಯಲ್ಲಿ ಫೆಬ್ರವರಿ 4ರಂದು ನರೇಂದ್ರ ಮೋದಿ ಬೆಂಗಳೂರಿಗೆ ಬರ್ತಿದ್ದಾರೆ. ಈಗಾಗಲೇ ಕನ್ನಡಪರ ಸಂಘಟನೆ ಫೆಬ್ರವರಿ ನಾಲ್ಕಕ್ಕೆ ಬೆಂಗಳೂರು ಬಂದ್ ಘೋಷಣೆ ಮಾಡಿದೆ. ಇದಕ್ಕೆ ಮಹದಾಯಿ ಹೋರಾಟಗಾರರು ಬೆಂಬಲ ಸೂಚಿಸಿದ್ದಾರೆ.

ಮೋದಿ ತಮ್ಮ ರ್ಯಾಲಿ ವೇಳೆ ಈ ಬಗ್ಗೆ ಮಾತನಾಡದೇ ಹೋದಲ್ಲಿ ಫೆಬ್ರವರಿ 4ರಂದು ಪಿಎಂಗೆ ಮುತ್ತಿಗೆ ಹಾಕುವುದಾಗಿ  ಮಹದಾಯಿ ಹೋರಾಟಗಾರ ಲೋಕನಾಥ್ ಹೆಬಸೂರು ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...