alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಾದಾಯಿಗಾಗಿ ವಿಷ ಸೇವಿಸಿದ ವಿದ್ಯಾರ್ಥಿಗಳು

mahadayi bns

ಬೆಂಗಳೂರು: ಮಹಾದಾಯಿ ನ್ಯಾಯಾಧೀಕರಣದ ತೀರ್ಪು ವಿರೋಧಿಸಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದೆ. ಉದ್ರಿಕ್ತರು ಹಲವು ಕಡೆಗಳಲ್ಲಿ ಸರ್ಕಾರಿ ಕಚೇರಿಗಳ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚಿದ್ದಾರೆ.

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮಹಾದಾಯಿ ಹೋರಾಟಗಾರರು, ರಸ್ತೆಗೆ ಇಳಿದು ಹೋರಾಟ ನಡೆಸಿದ್ದಾರೆ. ತರಕಾರಿ ಮಾರುಕಟ್ಟೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ ಎನ್ನಲಾಗಿದೆ. ಹೋರಾಟದ ಸಭೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಾದ ನಂದೀಶ ಮಠದ್ ಮತ್ತು ಸಂಗಮೇಶ್ ಚರಂತಿಮಠ ವಿಷಸೇವಿಸಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಇಬ್ಬರೂ, ಏಕಾಏಕಿ ವಿಷ ಸೇವಿಸಿದ್ದು, ಅಲ್ಲಿದ್ದವರು ತಡೆದರೂ, ಕುಡಿದಿದ್ದಾರೆ. ಅಸ್ವಸ್ಥಗೊಂಡ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.

ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಆದರೆ, 4 ಗಂಟೆಯವರೆಗೂ ಹೇಳಕ್ಕಾಗಲ್ಲ ಎಂದು ಕಿಮ್ಸ್ ವೈದ್ಯರು ಹೇಳಿದ್ದಾರೆ. ಅದೇ ರೀತಿ ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಪ್ರತಿಭಟನೆ ಕಾವು ಜೋರಾಗಿದೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಬೆಳಗಾವಿ, ಗದಗ, ಧಾರವಾಡ ಜಿಲ್ಲೆಯ ಹಲವು ಕಡೆಗಳಲ್ಲಿ ಮಹಾದಾಯಿ ಹೋರಾಟದ ಕಾವು ತೀವ್ರಗೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...