alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಾದಾಯಿ ತೀರ್ಪಿನ ವಿರುದ್ಧ ಹೆಚ್ಚಾಯ್ತು ಆಕ್ರೋಶ

Protest 44

ಬೆಂಗಳೂರು: ಗದಗ, ಹುಬ್ಬಳ್ಳಿ, ನರಗುಂದ, ಬೆಳಗಾವಿ ಜಿಲ್ಲೆಯ ರಾಮದುರ್ಗ ಮೊದಲಾದ ಕಡೆಗಳಿಗೆ ಕುಡಿಯುವ ನೀರು ಒದಗಿಸುವ ಮಹಾದಾಯಿ ಯೋಜನೆಗೆ ಸಂಬಂಧಿಸಿದಂತೆ ನ್ಯಾಯಾಧೀಕರಣದ ತೀರ್ಪು ವಿರೋಧಿಸಿ ವಿವಿಧೆಡೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಹುಬ್ಬಳ್ಳಿ, ಗದಗ ಸೇರಿದಂತೆ ವಿವಿಧ ಕಡೆಗಳಲ್ಲಿ ಭಾರೀ ಪ್ರತಿಭಟನೆ ನಡೆಸಲಾಗಿದೆ. ಕೆಲವು ಕಡೆ ಸಂಸತ್ ಸದಸ್ಯರ ಕಚೇರಿ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳ ಮೇಲೆಯೂ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರಗುಂದ, ಬೆಟಗೇರಿ, ಮೊದಲಾದ ಕಡೆಗಳಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಕೆಲವು ಕಡೆಗಳಲ್ಲಿ ರಸ್ತೆ, ಪ್ರಮುಖ ವೃತ್ತಗಳಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಹೇಳಲಾಗಿದೆ.

ಕನ್ನಡಪರ ಸಂಘಟನೆಗಳು, ರೈತರು, ಮಹಾದಾಯಿ ನ್ಯಾಯಾಧೀಕರಣದ ತೀರ್ಪಿನ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರರಂಗದಿಂದಲೂ ಹೋರಾಟಕ್ಕೆ ಬೆಂಬಲ ನೀಡಲಾಗಿದೆ. ಎಲ್ಲಾ ಪಕ್ಷಗಳು ರಾಜ್ಯದ ಹಿತಕ್ಕಾಗಿ ಒಂದಾಗಿ ಯೋಜನೆ ಜಾರಿಗೆ ಪ್ರಯತ್ನಿಸಬೇಕೆಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...