alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕ ಬಂದ್ ನಿಂದಾದ ನಷ್ಟವೆಷ್ಟು ಗೊತ್ತಾ…?

ಬೆಂಗಳೂರು: ಮಹಾದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ನಿನ್ನೆ ಕರ್ನಾಟಕ ಬಂದ್ ನಡೆಸಲಾಗಿದೆ. ಪ್ರಧಾನಿಯವರು ಮಧ್ಯ ಪ್ರವೇಶಿಸಿ ಮಹದಾಯಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿ, ಕರೆ ನೀಡಲಾಗಿದ್ದ ಬಂದ್ ಗೆ, ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಿ.ಎಂ.ಟಿ.ಸಿ., ಕೆ.ಎಸ್.ಆರ್.ಟಿ.ಸಿ. ಸೇರಿದಂತೆ ಹಲವು ಸಾರಿಗೆ ವಾಹನಗಳು ರಸ್ತೆಗೆ ಇಳಿಯಲಿಲ್ಲ. ಒಂದೆರಡು ಅಹಿತಕರ ಘಟನೆ ಹೊರತುಪಡಿಸಿ ಬಂದ್ ಶಾಂತಿಯುತವಾಗಿ ನಡೆದಿದೆ.

ಹೆಚ್ಚಿನ ಭಾಗದಲ್ಲಿ ಸಂಜೆಯವರೆಗೂ ಸಿನಿಮಾ ಮಂದಿರ, ಅಂಗಡಿ ಮುಂಗಟ್ಟುಗಳು, ವಾಣಿಜ್ಯ ವಹಿವಾಟು, ಕಂಪನಿ, ಹೋಟೆಲ್, ಸಾರಿಗೆ ಮೊದಲಾದವು ಸ್ಥಗಿತವಾಗಿದ್ದವು. ಕರ್ನಾಟಕ ಬಂದ್ ನಿಂದಾಗಿ ಸುಮಾರು 24,000 ಕೋಟಿ ರೂ. ನಷ್ಟವಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...