alex Certify
ಕನ್ನಡ ದುನಿಯಾ       Mobile App
       

Kannada Duniya

ದೇವಾಲಯದಲ್ಲಿ ಅಣ್ಣಾವ್ರ ಹಾಡನ್ನು ಹಾಡಿದ ಮಹಾರಾಷ್ಟ್ರ ಸಚಿವ

ಬೆಳಗಾವಿ: ನಗರ ಸ್ಥಳೀಯ ಸಂಸ್ಥೆ ಸದಸ್ಯರು ಕನ್ನಡ ವಿರೋಧಿ ಘೋಷಣೆ ಕೂಗಿದಾಗ, ಅವರ ಪರವಾಗಿ ಮಾತನಾಡಿದ್ದ ಮಹಾರಾಷ್ಟ್ರ ಸಚಿವ, ಕನ್ನಡದಲ್ಲೇ ಮಾತು ಆರಂಭಿಸಿ ವರನಟ ಡಾ. ರಾಜ್ ಕುಮಾರ್ ಅವರ ಹಾಡನ್ನು ಹಾಡಿ ಅಚ್ಚರಿ ಮೂಡಿಸಿದ್ದಾರೆ.

ಮಹಾರಾಷ್ಟ್ರ ಕಂದಾಯ ಸಚಿವ ಚಂದ್ರಕಾಂತ್ ಪಾಟೀಲ್ ಕೊಲ್ಹಾಪುರ ಉಸ್ತುವಾರಿ ಸಚಿವರಾಗಿದ್ದು, ಗೋಕಾಕ್ ತಾಲ್ಲೂಕಿನ ತವಗ ಗ್ರಾಮದ ದುರ್ಗಾದೇವಿ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.

ಸಮಾರಂಭದಲ್ಲಿ ಕನ್ನಡದಲ್ಲೇ ಮಾತು ಆರಂಭಿಸಿದ ಚಂದ್ರಕಾಂತ್ ಪಾಟೀಲ್, ‘ಆಕಸ್ಮಿಕ’ ಚಿತ್ರದಲ್ಲಿ ವರನಟ ಡಾ. ರಾಜ್ ಕುಮಾರ್ ಹಾಡಿದ್ದ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು….’ ಹಾಡನ್ನು ಹಾಡಿದ್ದಾರೆ.

ಹಿಂದೆ ಬೆಳಗಾವಿಯಲ್ಲಿ ಕನ್ನಡ ವಿರೋಧಿ ನಿಲುವು ತಳೆದ ಸ್ಥಳೀಯ ಸಂಸ್ಥೆ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವ ರೋಷನ್ ಬೇಗ್ ಎಚ್ಚರಿಕೆ ನೀಡಿದ್ದರು. ರೋಷನ್ ಬೇಗ್ ಹೇಳಿಕೆಯನ್ನು ಖಂಡಿಸಿ ಚಂದ್ರಕಾಂತ್ ಪಾಟೀಲ್ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು.

ಈಗ ಅವರೇ ಅಣ್ಣಾವ್ರ ಹಾಡನ್ನು ಹಾಡಿ, ಕನ್ನಡದಲ್ಲಿ ಮಾತು ಆರಂಭಿಸುವ ಮೂಲಕ ಕನ್ನಡ ಸಂಘಟನೆಗಳ ಕಾರ್ಯಕರ್ತರು ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರಲ್ಲಿ ಅಚ್ಚರಿ ಮೂಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...