alex Certify
ಕನ್ನಡ ದುನಿಯಾ       Mobile App
       

Kannada Duniya

ಜೆಡಿಎಸ್ ಸೇರ್ತಾರಾ ಶಾಸಕ ಮಾಲೀಕಯ್ಯ ಗುತ್ತೇದಾರ್?

malikayya-guttedarನಾಯಕರ ವಿರುದ್ದ ಅಸಮಾಧಾನ ಹೊಂದಿರುವ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ. ತಮಗೆ ಸೂಕ್ತ ಸ್ಥಾನಮಾನ ನೀಡದಿರುವ ಕುರಿತು ಆಗಾಗ ಬಹಿರಂಗ ಹೇಳಿಕೆ ನೀಡುತ್ತಿದ್ದ ಮಾಲೀಕಯ್ಯ ಗುತ್ತೇದಾರ್ ಇಂದು ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ್ ರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಕೆಪಿಸಿಸಿ ಕಛೇರಿಯಲ್ಲಿ ವೇಣುಗೋಪಾಲ್ ರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಲೀಕಯ್ಯ ಗುತ್ತೇದಾರ್, ಕೆಲವರು ತಾವು ಪಕ್ಷ ಬಿಡಲಿ ಎಂದೇ ಬಯಸುತ್ತಿದ್ದಾರೆ. ಹೀಗಾಗಿ ಉಸಿರುಗಟ್ಟಿಸುವ ವಾತಾವರಣ ಸೃಷ್ಟಿಸುತ್ತಿದ್ದಾರೆಂದು ಹೇಳಿದ್ದಾರೆ.

ತಮ್ಮ ಅಹವಾಲನ್ನು ವೇಣುಗೋಪಾಲ್ ರಿಗೆ ಮುಟ್ಟಿಸಿದ್ದು, ಸದ್ಯಕ್ಕೆ ಕಾಂಗ್ರೆಸ್ ತೊರೆಯುವ ಚಿಂತನೆಯಿಲ್ಲ. ತಮಗೆ ಜೆಡಿಎಸ್ ನಾಯಕರೊಂದಿಗೆ ಉತ್ತಮ ಒಡನಾಟವಿರುವುದು ನಿಜ. ಒಂದು ವೇಳೆ ಕಾಂಗ್ರೆಸ್ ತೊರೆಯಬೇಕೆಂದರೆ ಕ್ಷೇತ್ರದ ಜನತೆ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ. ಕಾಂಗ್ರೆಸ್ ವರಿಷ್ಟರು ಗೊಂದಲ ನಿವಾರಿಸುತ್ತಾರೆಂಬ ಭರವಸೆಯಿದೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...