alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಯುವಕ ಅರೆಸ್ಟ್

ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ವಿರುದ್ಧ ಸಾಮಾಜಿಕ ಜಾಲತಾಣಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ನಿಂದಿಸಿದ ಯುವಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಮೂಲದ 24ವರ್ಷದ ಪ್ರಶಾಂತ್ ಪೂಜಾರಿ ಎಂಬ ಯುವಕನನ್ನ ಬಂಟ್ವಾಳ ಸಮೀಪ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗಷ್ಟೆ ಇನ್ಸ್ಟಾಗ್ರಾಮ್ನಲ್ಲಿ ಪ್ರಶಾಂತ್ ಪೂಜಾರಿ ತುಳು ಭಾಷೆಯಲ್ಲಿ ಸಿಎಂ ವಿರುದ್ಧ ಅವಹೇಳನಕಾರಿ ಸಂದೇಶವೊಂದನ್ನ ಪೋಸ್ಟ್ ಮಾಡಿದ್ದ. ಸಮುದಾಯಗಳ ನಡುವಿನ ಭಾವನೆಗಳಿಗೆ ಧಕ್ಕೆ ತರುವ ಆರೋಪದಲ್ಲಿ ಯುವಕನ್ನ ಪೊಲೀಸರು ಬಂಧಿಸಿದ್ದು, ಆತನ ಮೇಲೆ ಸುಮೋಟೋ ಪ್ರಕರಣವನ್ನು ದಾಖಲಿಸಲಾಗಿದೆ.

ಭಾರತೀಯ ಅಪರಾಧ ದಂಡ ಸಂಹಿತೆಯ ಕಲಂ 153[A] ಅಡಿಯಲ್ಲಿ ಪ್ರಶಾಂತ್ ಪೂಜಾರಿ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು , ಈ ಮೂಲಕ ಸಮಾಜದ ವಿವಿಧ ಸಮುದಾಯಗಳ ನಡುವೆ ಶಾಂತಿ ಕದಡುವ ಯತ್ನ ಮಾಡೋರಿಗೆ ಬಂಧನದ ಶಿಕ್ಷೆ ಅನ್ನೋ ಸಂದೇಶ ರವಾನಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...