alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಪಿಂಗ್ ಮಾಲ್ ನಲ್ಲಿ ಯುವತಿಯ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಯುವಕ ಅರೆಸ್ಟ್

ಸ್ನೇಹಿತರೊಂದಿಗೆ ಶಾಪಿಂಗ್ ಮಾಲ್ ಗೆ ಸಿನಿಮಾ ನೋಡಲು ತೆರಳಿದ್ದ ಯುವತಿಯೊಬ್ಬರ ವಿಡಿಯೋ ಮಾಡಿದ್ದ ಯುವಕ ಈಗ ಅರೆಸ್ಟ್ ಆಗಿದ್ದಾನೆ. ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಯುವಕ ತನ್ನ ಮೊಬೈಲ್ ಕ್ಯಾಮೆರಾದಲ್ಲಿ ಯುವತಿಯ ದೃಶ್ಯ ಸೆರೆ ಹಿಡಿಯುತ್ತಿದ್ದನೆನ್ನಲಾಗಿದ್ದು, ಇದನ್ನು ಗಮನಿಸಿದ ಯುವತಿ, ಸ್ನೇಹಿತರೊಂದಿಗೆ ಯುವಕನ ಬಳಿ ಬಂದು ಇದನ್ನು ಪ್ರಶ್ನಿಸಿದ್ದಾರೆ. ಅಲ್ಲದೆ ಯುವಕನ ಮೊಬೈಲ್ ಕಸಿದುಕೊಂಡು ಪರಿಶೀಲಿಸಿದಾಗ ಮೊಬೈಲ್ ನಲ್ಲಿ ಯುವತಿಯ ದೃಶ್ಯವನ್ನು ಸೆರೆ ಹಿಡಿದಿರುವುದು ಪತ್ತೆಯಾಗಿದೆ.

ಈ ಸಂಬಂಧ ಯುವತಿ ಮಹದೇವಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಯುವಕನ ಮೊಬೈಲ್ ಪರಿಶೀಲಿಸಿದ್ದು, ಮೊಬೈಲ್ ನಲ್ಲಿ ಇತರೆ ಯುವತಿಯರ ದೃಶ್ಯಗಳೂ ಕಂಡು ಬಂದಿವೆ ಎನ್ನಲಾಗಿದೆ. ಇದೀಗ ಆತನನ್ನು ವಶಕ್ಕೆ ಪಡೆದಿರುವ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...