alex Certify
ಕನ್ನಡ ದುನಿಯಾ       Mobile App
       

Kannada Duniya

ತಡರಾತ್ರಿ ನಿದ್ದೆಯಲ್ಲಿದ್ದ ಪ್ರಯಾಣಿಕರು ಬೆಚ್ಚಿ ಬಿದ್ರು

ಮಂಡ್ಯ: ಚಲಿಸುತ್ತಿದ್ದ ಬಸ್ ಗೆ ಬೆಂಕಿ ತಗುಲಿ, ಸುಮಾರು 15 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ನಡೆದಿದೆ.

ಖಾಸಗಿ ಕಂಪನಿಗೆ ಸೇರಿದ ಬಸ್ ಇದಾಗಿದ್ದು, ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ವ್ಯಾಪಿಸಿದೆ.

ಹೊಗೆ ಕಾಣಿಸಿಕೊಂಡ ಕೂಡಲೇ ಎಚ್ಚೆತ್ತ ಚಾಲಕ ಮತ್ತು ಕ್ಲೀನರ್ ರಸ್ತೆಯಲ್ಲೇ ಬಸ್ ನಿಲ್ಲಿಸಿ, ನಿದ್ದೆಯಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೆಲವೇ ಕ್ಷಣದಲ್ಲಿ ಬೆಂಕಿ ಬಸ್ ಗೆ ವ್ಯಾಪಿಸಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಬಸ್ ಭಾಗಶಃ ಸುಟ್ಟು ಹೋಗಿದೆ. ಮದ್ದೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...