alex Certify
ಕನ್ನಡ ದುನಿಯಾ       Mobile App
       

Kannada Duniya

ಪುಟ್ಟಣ್ಣಯ್ಯ ಪ್ರತಿನಿಧಿಸಿದ್ದ ಕ್ಷೇತ್ರದಲ್ಲಿ ಪುತ್ರ ದರ್ಶನ್ ಸ್ಪರ್ಧೆ

ಮಂಡ್ಯ: ಇತ್ತೀಚೆಗಷ್ಟೇ ನಿಧನರಾದ ರೈತಸಂಘದ ಮುಖಂಡ ಕೆ.ಎಸ್. ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಮೇಲುಕೋಟೆ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ತಂದೆಯವರ ರೀತಿಯಲ್ಲೇ ರೈತಸಂಘ ಮತ್ತು ರಾಜಕೀಯದಲ್ಲಿ ಸಕ್ರಿಯವಾಗಲಿದ್ದಾರೆ. ಕ್ಯಾತನಹಳ್ಳಿಯಲ್ಲಿ ಪುಟ್ಟಣ್ಣಯ್ಯನವರ ಸಮಾಧಿಗೆ ನೂರಾರು ಮಂದಿ ರೈತಸಂಘದ ಕಾರ್ಯಕರ್ತರು ಪುಷ್ಪನಮನ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪುಟ್ಟಣ್ಣಯ್ಯನವರ ಪತ್ನಿ ಸುನಿತಾ, ತಮ್ಮ ಪುತ್ರನನ್ನು ನಿಮ್ಮ ಮಡಿಲಿಗೆ ಹಾಕುತ್ತಿದ್ದೇನೆ. ಕೈಹಿಡಿದು ನಡೆಸಿ ಎಂದು ಕಣ್ಣೀರಿಟ್ಟಿದ್ದಾರೆ.

ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ ದರ್ಶನ್ ಪುಟ್ಟಣ್ಣಯ್ಯ ಸ್ಪರ್ಧಿಸುವುದಾಗಿ ಸಭೆಯಲ್ಲಿ ಘೋಷಿಸಲಾಗಿದ್ದು, ಹಸಿರು ಟವೆಲ್ ತಿರುಗಿಸಿ ಅಲ್ಲಿದ್ದವರೆಲ್ಲಾ ಬೆಂಬಲ ಸೂಚಿಸಿದ್ದಾರೆ.

ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸುವ ಕುರಿತು ಮಾತುಗಳು ಕೇಳಿ ಬಂದಿದ್ದವಾದರೂ, ಪುಟ್ಟಣ್ಣಯ್ಯ ಕುಟುಂಬ ಕಾಂಗ್ರೆಸ್ ನಿಂದ ದೂರ ಉಳಿದಿದೆ. ಸ್ವರಾಜ್ ಇಂಡಿಯಾ ಪಕ್ಷದಿಂದ ದರ್ಶನ್ ಪುಟ್ಟಣ್ಣಯ್ಯ ಸ್ಪರ್ಧಿಸುವುದು ಖಚಿತವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...