alex Certify
ಕನ್ನಡ ದುನಿಯಾ       Mobile App
       

Kannada Duniya

ಜಪ್ತಿಯಾಯ್ತು ಬರೋಬ್ಬರಿ 20 ಕೋಟಿ ರೂ.

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ರಾತ್ರಿ ಹಣ ಸಾಗಿಸುತ್ತಿದ್ದ ವಾಹನ ತಡೆದು ಸಾರ್ವಜನಿಕರು ಹೈಡ್ರಾಮ ನಡೆಸಿದ್ದಾರೆ.

ಶ್ರೀರಂಗಪಟ್ಟಣ ಭಾರತೀಯ ಸ್ಟೇಟ್ ಬ್ಯಾಂಕ್(ಎಸ್.ಬಿ.ಐ.) ನಿಂದ ವಾಹನವೊಂದರಲ್ಲಿ ಬ್ಯಾಂಕ್ ಸಿಬ್ಬಂದಿ 20 ಕೋಟಿ ರೂ. ಹಣವನ್ನು ಮಳವಳ್ಳಿಗೆ ತಂದಿದ್ದಾರೆ. ಇದಕ್ಕೆ ಬೆಂಗಾವಲಾಗಿ ಮತ್ತೊಂದು ವಾಹನ ಬಂದಿದೆ.

ಚುನಾವಣೆಗೆ ಬಳಸಲು ಹಣ ಸಾಗಿಸಲಾಗುತ್ತಿದೆ ಎಂದು ಆರೋಪಿಸಿ ಸಾರ್ವಜನಿಕರು ಪ್ರಶ್ನಿಸಿದ್ದು, ಚುನಾವಣಾಧಿಕಾರಿಗಳು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಗೊಂದಲ ಉಂಟಾಗಿ ಹೈಡ್ರಾಮವೇ ನಡೆದಿದೆ. ಸೂಕ್ತ ದಾಖಲೆ ಇಲ್ಲದ ಕಾರಣ ಚುನಾವಣಾಧಿಕಾರಿಗಳು ಹಣವನ್ನು ಜಪ್ತಿ ಮಾಡಿ, ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...