alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಷುಲ್ಲಕ ಕಾರಣಕ್ಕೆ ತಂದೆಯಿಂದಲೇ ಮಗನ ಹತ್ಯೆ

ಕ್ಷುಲ್ಲಕ ಕಾರಣಕ್ಕೆ ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಕೋಣಹಳ್ಳಿತಿಟ್ಟು ಗ್ರಾಮದಲ್ಲಿ ನಡೆದಿದೆ.

ಕೃಷ್ಣಪ್ಪ ಎಂಬಾತ ಮಂಗಳವಾರ ರಾತ್ರಿ ತನ್ನ ಮಗ ವಾಸು ಜೊತೆ ಜಗಳವಾಡಿದ್ದು, ಸಿಟ್ಟಿನ ಭರದಲ್ಲಿ ಸಲಾಕೆಯಿಂದ ಮಗನ ತಲೆಗೆ ಹೊಡೆದಿದ್ದಾನೆ. ಇದರಿಂದ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಬಳಿಕ ಕೃಷ್ಣಪ್ಪ, ಯಾರೋ ತನ್ನ ಮಗನನ್ನು ಕೊಂದು ಮೃತದೇಹವನ್ನು ತಂದು ಹಾಕಿರುವುದಾಗಿ ಪೊಲೀಸರ ಬಳಿ ಹೇಳಿದ್ದಾನೆ.

ಅನುಮಾನಗೊಂಡ ಪೊಲೀಸರು ವಿಚಾರಣೆಗೊಳಪಡಿಸಿದ ವೇಳೆ ತಾನೇ ಈ ಹತ್ಯೆ ಮಾಡಿರುವುದಾಗಿ ಕೃಷ್ಣಪ್ಪ ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಬಂಧಿಸಿರುವ ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...