alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೊಂದು ಮರ್ಯಾದೆಗೇಡು ಹತ್ಯೆ..?

maryade-gedu

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಮರ್ಯಾದೆಗೇಡು ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ನಾಗಮಂಗಲ ತಾಲ್ಲೂಕಿನ ಹೆಚ್. ಕ್ಯಾತನಹಳ್ಳಿಯಲ್ಲಿ 17 ವರ್ಷ ವಯಸ್ಸಿನ ವಿದ್ಯಾರ್ಥಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದು, ಪೋಷಕರು ಪೊಲೀಸರಿಗೆ ಮಾಹಿತಿ ನೀಡದೇ ಶವ ಸುಡುವ ಮೂಲಕ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ಶ್ರವಣಬೆಳಗೊಳದ ಖಾಸಗಿ ಕಾಲೇಜ್ ನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ, ಯುವಕನೊಬ್ಬನನ್ನು ಪ್ರೀತಿಸಿದ್ದು, ಇದು ಗೊತ್ತಾಗಿ ಆಕೆಯ ಪೋಷಕರು ಬೇರೆ ಯುವಕನೊಂದಿಗೆ ಮದುವೆ ನಿಶ್ಚಯ ಮಾಡಿದ್ದಾರೆ. ಇದರಿಂದ ಮನನೊಂದ ಆಕೆಯ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದನೆನ್ನಲಾಗಿದೆ.

ಮನೆಯಲ್ಲಿ ವಿದ್ಯಾರ್ಥಿನಿ ಪೋಷಕರೊಂದಿಗೆ ಜಗಳವಾಡಿದ್ದಾಳೆ. ನಂತರದಲ್ಲಿ ಆಕೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದು, ಪೋಷಕರು ಪೊಲೀಸರಿಗೆ ಮಾಹಿತಿ ನೀಡದೇ ಅಂತ್ಯ ಸಂಸ್ಕಾರ ಮಾಡಿದ್ದಾರೆ ಎನ್ನಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...