alex Certify
ಕನ್ನಡ ದುನಿಯಾ       Mobile App
       

Kannada Duniya

ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ, ಪ್ರಯಾಣಿಕರು ಪಾರು

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ಮಂಡ್ಯದ ಕೋಣನಹಳ್ಳಿ ಕ್ರಾಸ್ ಬಳಿ ರಾತ್ರಿ ಭಾರೀ ಮಳೆಯಾಗಿದ್ದು, ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದಿದೆ. ಈ ಮಾರ್ಗದಲ್ಲಿ 30 ಕ್ಕೂ ವಿದ್ಯುತ್ ಕಂಬಗಳು ಉರುಳಿದ್ದು, ವಿದ್ಯುತ್ ತಂತಿಗಳು ಬಸ್ಸಿನ ಮೇಲೆ ಹಾಗೂ ರಸ್ತೆಯಲ್ಲಿ ಹರಡಿಕೊಂಡಿವೆ.

ಈ ವೇಳೆ ವಿದ್ಯುತ್ ಸಂಪರ್ಕವಿರಲಿಲ್ಲ. ಬಸ್ ನಲ್ಲಿದ್ದವರೆಲ್ಲಾ ಅಪಾಯದಿಂದ ಪಾರಾಗಿದ್ದಾರೆ. ಆಕಸ್ಮಾತ್ ವಿದ್ಯುತ್ ಪ್ರವಹಿಸಿದ್ದರೆ, ದೊಡ್ಡ ಅನಾಹುತವಾಗುವ ಸಾಧ್ಯತೆ ಇತ್ತು. ವಿದ್ಯುತ್ ಕಂಬಗಳು ಮತ್ತು ತಂತಿಗಳು ರಸ್ತೆಗೆ ಬಿದ್ದಿರುವುದರಿಂದ ಮಂಡ್ಯ – ಹೊಳಲು ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...