alex Certify
ಕನ್ನಡ ದುನಿಯಾ       Mobile App
       

Kannada Duniya

ಮಂಡ್ಯದಲ್ಲಿ ರಮ್ಯಾ ಮನೆ ಮಾಡಿದ್ದೇಕೆ ಗೊತ್ತಾ..?

ನಟಿ ಹಾಗೂ ರಾಜಕಾರಣಿ ರಮ್ಯಾ ಅವರು ಮಂಡ್ಯದಲ್ಲಿ ಮನೆ ಮಾಡಿದ್ದಾರೆ. ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತಾದರೂ ಈ ಗೊಂದಲಗಳಿಗೆಲ್ಲಾ ತೆರೆ ಬಿದ್ದಿದೆ.

ರಮ್ಯಾ ಎ.ಐ.ಸಿ.ಸಿ. ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ವಿಧಾನಸಭೆ ಚುನಾವಣೆಗಿಂತ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ.

ಸಂಸತ್ ಸ್ಥಾನಕ್ಕೆ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಅವರು ಮುಂದಿನ ಲೋಕಸಭೆ ಚುನಾವಣೆಗೆ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳತೊಡಗಿದ್ದಾರೆ.

ಆಪ್ತರು ಮತ್ತು ಹಿತೈಷಿಗಳ ಬಳಿ ಈ ಕುರಿತು ಮಾತನಾಡಿರುವ ಅವರು, ಮುಂದಿನ ರಾಜಕೀಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಂಡ್ಯದಲ್ಲಿ ಮನೆ ಮಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...