alex Certify
ಕನ್ನಡ ದುನಿಯಾ       Mobile App
       

Kannada Duniya

ಮಂಡ್ಯ ಜಿಲ್ಲೆಯಲ್ಲಿ ಕಟ್ಟೆಚ್ಚರ

mandya m

ಮಂಡ್ಯ: ಕಳೆದ 11 ದಿನಗಳಿಂದ ಮಂಡ್ಯ ಜಿಲ್ಲೆಯಲ್ಲಿ, ಕಾವೇರಿ ನದಿ ನೀರಿನ ವಿಚಾರವಾಗಿ, ಹೋರಾಟ ಮುಂದುವರೆದಿದೆ. ಇಂದು ಕನ್ನಡ ಸಂಘಟನೆಗಳು ರೈಲು ತಡೆಗೆ ಕರೆ ನೀಡಿದ್ದರಿಂದ ಭದ್ರತೆ ಹೆಚ್ಚಿಸಲಾಗಿದೆ.

ಮಂಡ್ಯ ಜಿಲ್ಲೆಯ 9 ರೈಲು ನಿಲ್ದಾಣಗಳಲ್ಲಿಯೂ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮಂಡ್ಯ, ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಜಲಾಶಯ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕೆಂದು ರೈತರು ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಜಿಲ್ಲಾಧಿಕಾರಿ ಆದೇಶದಂತೆ ಜಿಲ್ಲೆಯಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗಲಿದ್ದು, ವಾಹನ ಸಂಚಾರ ಕೂಡ ಎಂದಿನಂತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆ ಮುಂದುವರೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...