alex Certify
ಕನ್ನಡ ದುನಿಯಾ       Mobile App
       

Kannada Duniya

ಮಂಗಳೂರಲ್ಲಿ ಬಸ್ಸಿಗೆ ಕಲ್ಲು, ಟೈಯರ್ ಗೆ ಬೆಂಕಿ

man

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ವಿರೋಧಿಸಿ, ಸಂಘ ಪರಿವಾರ ಬಂದ್ ಗೆ ಕರೆ ನೀಡಿದೆ.

ರಾತ್ರಿಯಿಂದಲೇ ಮಂಗಳೂರಿನ ಕೆಲವೆಡೆ ಕಲ್ಲು ತೂರಾಟ ನಡೆದಿದೆ. ಕೇರಳ ಸಾರಿಗೆ ಹಾಗೂ ಕರ್ನಾಟಕ ಸಾರಿಗೆ ಬಸ್ ಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ.

ಮಂಗಳೂರಿನ ಕಂಕನಾಡಿಯಲ್ಲಿ ಬಸ್ ಗೆ ಕಲ್ಲೆಸೆದ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಜಾಗ್ರತೆ ಕ್ರಮವಾಗಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಅಂಗಡಿ, ಮುಂಗಟ್ಟುಗಳು ಬಂದ್ ಆಗಿವೆ. ವಾಹನ ಸಂಚಾರ ವಿರಳವಾಗಿದೆ. ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ ನಡೆಸಲಾಗಿದೆ. ಸೌಹಾರ್ದ ಸಮಾವೇಶದಲ್ಲಿ ಪಿಣರಾಯಿ ವಿಜಯನ್ ಪಾಲ್ಗೊಳ್ಳಲಿದ್ದಾರೆ. ಸಮಾವೇಶಕ್ಕೆ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ.

ಇಂದು ಜಿಲ್ಲೆಯ 124 ಕಾಲೇಜುಗಳಲ್ಲಿ 17315 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಸೂಚನೆ ನೀಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆ ಹಾಗೂ ಹೊರ ಜಿಲ್ಲೆಗಳ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...