alex Certify
ಕನ್ನಡ ದುನಿಯಾ       Mobile App
       

Kannada Duniya

ಅರೆಬೆತ್ತಲೆ ಓಡಿದ್ರು ಮಸಾಜ್ ಪಾರ್ಲರ್ ಗ್ರಾಹಕರು

man-parari-dd

ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ಮೇಯರ್ ದಾಳಿ ನಡೆಸಿದ ಸಂದರ್ಭದಲ್ಲಿ ಅಲ್ಲಿದ್ದ ಗ್ರಾಹಕರು ಅರೆಬೆತ್ತಲೆ ಪರಾರಿಯಾದ ಘಟನೆ ನಡೆದಿದೆ.

ಮಂಗಳೂರಿನ ಬಲ್ಮಠ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿಯಮಗಳನ್ನು ಮೀರಿ ಮಸಾಜ್ ಪಾರ್ಲರ್ ನಡೆಸಲಾಗುತ್ತಿದ್ದು, ನಿನ್ನೆ ಮೇಯರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ದಾಳಿಯ ಸಂದರ್ಭದಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಅಲ್ಲದೇ ಕೆಲವರು ಅರೆಬೆತ್ತಲೆಯಾಗಿಯೇ ಅಲ್ಲಿಂದ ಓಡಿ ಹೋಗಿದ್ದಾರೆ ಎನ್ನಲಾಗಿದೆ.

ಮಸಾಜ್ ಪಾರ್ಲರ್ ಗಳಲ್ಲಿ ಪುರುಷರಿಗೆ ಮಹಿಳೆಯರು ಮಸಾಜ್ ಮಾಡುತ್ತಿದ್ದು, ಹೊರಗಿನಿಂದ ಯುವತಿಯರನ್ನು ಕರೆತಂದು ಅನೈತಿಕ ಚಟುವಟಿಕೆ ನಡೆಸಲಾಗುತ್ತಿತ್ತು ಎಂದು ಹೇಳಲಾಗಿದೆ.

ದಾಳಿಯ ಸಂದರ್ಭದಲ್ಲಿ ಕೆಲವರು ಮೇಯರ್ ಜೊತೆಗೆ ಮಾತಿನ ಚಕಮಕಿ ನಡೆಸಿದ್ದಾರೆ. ಆದರೆ, ಇದಕ್ಕೆ ಜಗ್ಗದ ಮೇಯರ್ ದಾಳಿ ಮುಂದುವರೆಸಿ, ನಿಯಮ ಮೀರಿ ನಡೆಯುತ್ತಿದ್ದ ಪಾರ್ಲರ್ ಗಳನ್ನು ಬಂದ್ ಮಾಡಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...