alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಮರಸ್ಯ ನಡಿಗೆ ಸ್ಥಳದಲ್ಲಿ ಕಲ್ಲು ತೂರಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯ ಉದ್ದೇಶದಿಂದ, ಇಂದು ಆಯೋಜಿಸಿದ್ದ ಸಾಮರಸ್ಯ ನಡಿಗೆ ಆರಂಭವಾಗುವ ಸ್ಥಳದಲ್ಲಿ ಕಲ್ಲು ತೂರಾಟ ನಡೆಸಲಾಗಿದೆ.

ಫರಂಗಿಪೇಟೆಯಿಂದ ಸಾಮರಸ್ಯ ನಡಿಗೆ ಆರಂಭವಾಗಬೇಕಿದ್ದು, ಬೆಳಿಗ್ಗೆ 2 ಬಸ್ ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ರಾಜಹಂಸ ಮತ್ತು ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಸ್ಥಳಕ್ಕೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಸಚಿವರಾದ ರಮಾನಾಥ ರೈ, ಯು.ಟಿ. ಖಾದರ್, ನಟ ಪ್ರಕಾಶ್ ಸೇರಿದಂತೆ ಹಲವರು ಸಾಮರಸ್ಯ ನಡಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ ನಡಿಗೆ ಆರಂಭವಾಗುವ ಸ್ಥಳದಲ್ಲಿ ಮೈಸೂರು –ಮಂಗಳೂರು ಮಾರ್ಗದ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...