alex Certify
ಕನ್ನಡ ದುನಿಯಾ       Mobile App
       

Kannada Duniya

ಕೊನೆಗೂ ಪೊಲೀಸರಿಗೆ ಶರಣಾದ ಸಿಎಂ ಆಪ್ತ ಮರಿಗೌಡ

marigowda 2333ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಮರಿಗೌಡ, ಕೊನೆಗೂ ಪೊಲೀಸರಿಗೆ ಶರಣಾಗಿದ್ದಾರೆ. ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ವಕೀಲ ಜಗದೀಶ್ ಅವರೊಂದಿಗೆ ಬಂದು ಮರಿಗೌಡ ಶರಣಾದರು.

ನಿರೀಕ್ಷಣಾ ಜಾಮೀನು ಕೋರಿ ಮೈಸೂರು ನ್ಯಾಯಾಲಯದಲ್ಲಿ ಮರಿಗೌಡ ಸಲ್ಲಿಸಿದ್ದ ಅರ್ಜಿ ವಜಾಗೊಂಡ ಬಳಿಕ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ನಲ್ಲಿಯೂ ಜಾಮೀನು ಅರ್ಜಿ ವಜಾಗೊಳ್ಳುವ ಸೂಚನೆ ದೊರೆಯುತ್ತಿದ್ದಂತೆಯೇ ತಮ್ಮ ಅರ್ಜಿಯನ್ನು ಹಿಂಪಡೆದಿದ್ದರು. ತಮ್ಮ ವಿರುದ್ದ ಜಿಲ್ಲಾಧಿಕಾರಿ ಶಿಖಾ ಅವರು ದೂರು ದಾಖಲಿಸಿದ ಬಳಿಕ ನಾಪತ್ತೆಯಾಗಿದ್ದ ಮರಿಗೌಡ ಕೊನೆಗೂ ತಿಂಗಳ ಬಳಿಕ ಪೊಲೀಸರಿಗೆ ಶರಣಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...