alex Certify
ಕನ್ನಡ ದುನಿಯಾ       Mobile App
       

Kannada Duniya

ಅರಮನೆಯಲ್ಲಿ ಜೋರಾಗಿದೆ ಮದುವೆ ಸಂಭ್ರಮ

yaduveer

ಮೈಸೂರು: ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ಅವರ ವಿವಾಹ ಮಹೋತ್ಸವಕ್ಕೆ ಮೈಸೂರು ಅರಮನೆ ಸಜ್ಜಾಗಿದೆ. ಈಗಾಗಲೇ ಮದುವೆ ತಯಾರಿ ಭರದಿಂದ ಸಾಗುತ್ತಿದ್ದು, ಆಹ್ವಾನ ಪತ್ರಿಕೆ ಹಂಚಲಾಗುತ್ತಿದೆ.

 

ಜೂನ್ 24ರಿಂದ ಮದುವೆ ಸಮಾರಂಭ ಆರಂಭವಾಗಲಿದ್ದು, 27 ರಂದು ಮದುವೆ ನಡೆಯಲಿದೆ. ಜೂನ್ 28ರಂದು ಆರತಕ್ಷತೆ ನಡೆಯಲಿದೆ. ಮದುವೆ ಸಮಾರಂಭದ ಹಿನ್ನಲೆಯಲ್ಲಿ ಜೂನ್ 24ರಿಂದ 6 ದಿನಗಳ ಕಾಲ ಸಾರ್ವಜನಿಕರಿಗೆ ಅರಮನೆ ಪ್ರವೇಶ ನಿಷೇಧಿಸಲಾಗಿದೆ. ತಮ್ಮ ಮದುವೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ತಮ್ಮ ಮದುವೆ ಸರಳ ಮತ್ತು ಸಾಂಪ್ರದಾಯಿಕವಾಗಿ ನಡೆಯಲಿದೆ. ಯದುವಂಶದ ಸಂಪ್ರದಾಯದಂತೆ 5 ದಿನ ಮದುವೆ ಕಾರ್ಯ ನಡೆಯಲಿವೆ ಎಂದು ಹೇಳಿದ್ದಾರೆ.

 

ಮೈಸೂರು ವಿನಾಯಕನಗರದ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದ ಯದುವೀರ್, ಅಲ್ಲಿನ ಮಕ್ಕಳಿಗೆ ಮೈಸೂರಿನ ಇತಿಹಾಸದ ಬಗ್ಗೆ ಪಾಠ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಂಪ್ರದಾಯಿಕ ರೀತಿಯಲ್ಲಿ ಸರಳವಾಗಿ ಮದುವೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...