alex Certify
ಕನ್ನಡ ದುನಿಯಾ       Mobile App
       

Kannada Duniya

‘ಮಾಸ್ತಿಗುಡಿ’ ದುರಂತ, ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯುವನಟರಿಬ್ಬರು ಚಿತ್ರೀಕರಣದ ವೇಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಮಾಸ್ತಿಗುಡಿ’ ಚಿತ್ರದ ನಿರ್ಮಾಪಕ, ನಿರ್ದೇಶಕ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ‘ಮಾಸ್ತಿಗುಡಿ’ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದ ಚಿತ್ರೀಕರಣದ ವೇಳೆ ಯುವನಟರಾದ ಅನಿಲ್ ಮತ್ತು ಉದಯ್ ಮೃತಪಟ್ಟಿದ್ದರು.

ಚಿತ್ರದ ನಿರ್ಮಾಪಕ ಸುಂದರ್ ಗೌಡ, ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿವರ್ಮ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣಕ್ಕೆ ಮಧ್ಯಂತರ ತಡೆ ನೀಡದ ಕೋರ್ಟ್ ವಿಚಾರಣೆಯನ್ನು ಸೆಪ್ಟಂಬರ್ 19 ಕ್ಕೆ ಮುಂದೂಡಿದೆ. ನ್ಯಾ. ಅರವಿಂದ್ ಕುಮಾರ್, ಸಾಹಸ ದೃಶ್ಯದ ಚಿತ್ರೀಕರಣದ ಸಂದರ್ಭದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿತ್ತು ಎಂದು ಹೇಳಿದ್ದಾರೆ. ಅಲ್ಲದೇ, ಈ ಪ್ರಕರಣದ ಕುರಿತಾಗಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...