alex Certify
ಕನ್ನಡ ದುನಿಯಾ       Mobile App
       

Kannada Duniya

ಮಠ-ಮಂದಿರ ವಶಕ್ಕೆ ಹುನ್ನಾರ, ಆಕ್ರೋಶಕ್ಕೆ ತುತ್ತಾದ ಸರ್ಕಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮಠ, ಮಂದಿರಗಳ ವಶಕ್ಕೆ ಮುಂದಾಗಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಧಾರ್ಮಿಕ ದತ್ತಿ ಕಾಯ್ದೆ ವ್ಯಾಪ್ತಿಗೆ ಮಠಗಳನ್ನು ತರುವ ಕುರಿತಾಗಿ ಸಲಹೆಯನ್ನು ಕೇಳಿ ಸುತ್ತೋಲೆ ಹೊರಡಿಸಲಾಗಿದೆ.

ಮುಸ್ಲಿಮರಿಗೆ ಸೇರಿದ ಧಾರ್ಮಿಕ ಸಂಸ್ಥೆ ಹೊರತಾದ ಹಿಂದೂ, ಜೈನ, ಬೌದ್ಧ, ಸಿಖ್ ಸಮುದಾಯಗಳ ಧಾರ್ಮಿಕ ಸಂಸ್ಥೆಗಳು, ಮಠಗಳು, ದೇವಾಲಯಗಳನ್ನು ಧಾರ್ಮಿಕ ದತ್ತಿ ಕಾಯ್ದೆಯಡಿ ತರಲು ಹೊಸ ಕಾಯ್ದೆ ರೂಪಿಸಲಾಗುತ್ತಿದ್ದು, ಸುತ್ತೋಲೆಯಲ್ಲಿ ಅಭಿಪ್ರಾಯ ಕೇಳಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ಸ್ಥಾನಿಕ ಸಹಾಯಕರು ಸುತ್ತೋಲೆಯನ್ನು ಹೊರಡಿಸಿದ್ದು, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.

ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಸ್ಪಷ್ಟನೆ ನೀಡಿದ್ದು, ಧಾರ್ಮಿಕ ದತ್ತಿ ಕಾಯ್ದೆಯನ್ನು ರದ್ದುಪಡಿಸಿರುವುದರಿಂದ ಹೈಕೋರ್ಟ್ ನಿರ್ದೇಶನದಂತೆ ಹೊಸ ಕಾಯ್ದೆಯನ್ನು ರೂಪಿಸಲಾಗುತ್ತಿದೆ. ಕಾಯ್ದೆಯ ಕರಡು ರಚಿಸಲು ಸಮಿತಿ ರಚಿಸಿ ಅಹವಾಲು ಕೇಳಲಾಗಿದೆ. ಮಠಗಳನ್ನು ನಿಯಂತ್ರಿಸುವ, ಧಾರ್ಮಿಕ ಸಂಸ್ಥೆ ವಶಕ್ಕೆ ಪಡೆಯುವ ಉದ್ದೇಶ ಇಲ್ಲ ಎಂದು ಹೇಳಿದ್ದಾರೆ.

ಸರ್ಕಾರದ ಈ ನಿರ್ಧಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಗಮನಕ್ಕೆ ಬಂದಿದೆ. ಕೂಡಲೇ ಸಚಿವರು ಅಧಿಕಾರಿಗಳನ್ನು ಕರೆಸಿಕೊಂಡ ಸಿ.ಎಂ. ತರಾಟೆಗೆ ತೆಗೆದುಕೊಂಡಿದ್ದಾರೆ. ಚುನಾವಣೆ ಸಮೀಪದಲ್ಲಿರುವ ಸಂದರ್ಭದಲ್ಲಿ ವಿವಾದಾತ್ಮಕ ಕ್ರಮ ಕೈಗೊಳ್ಳಬಾರದೆಂದು ಎಚ್ಚರಿಕೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...