alex Certify
ಕನ್ನಡ ದುನಿಯಾ       Mobile App
       

Kannada Duniya

ಮಾನ್ಯತೆ ಸಿಗುವವರೆಗೆ ಹೋರಾಟ: ಮಾತೆ ಮಹಾದೇವಿ

ಚಿತ್ರದುರ್ಗ: ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಸಿಗುವವರೆಗೆ ಹೋರಾಟ ನಡೆಸಲಾಗುವುದು ಎಂದು ಮಾತೆ ಮಹಾದೇವಿ ಹೇಳಿದ್ದಾರೆ.

ಚಿತ್ರದುರ್ಗದ ಬಸವ ಮಂಟಪದಲ್ಲಿ ಮಾತನಾಡಿದ ಅವರು, ಲಿಂಗಾಯತರು ಮತ್ತು ವೀರಶೈವರು ಒಂದಾಗಲು ಸಾಧ್ಯವಿಲ್ಲ. ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಹಾನಗಲ್ ಕುಮಾರಸ್ವಾಮಿಗಳು ವೀರಶೈವ ಮಹಾಸಭಾ ಸ್ಥಾಪಿಸಿ, ಲಿಂಗಾಯತರು ಮತ್ತು ವೀರಶೈವರು ಒಂದೇ ಎಂದು ಬಿಂಬಿಸಿದ್ದರು. ಆದರೆ, ಲಿಂಗಾಯತರು ಮತ್ತು ವೀರಶೈವರು ಬೇರೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಸುತ್ತೂರು ಸ್ವಾಮೀಜಿಯವರು ಮೌನ ವಹಿಸಿದ್ದು, ಅವರನ್ನು ಸಂಪರ್ಕಿಸಿ ಚರ್ಚೆ ನಡೆಸುತ್ತೇನೆ. ಅವರು ಬೆಂಬಲಿಸದಿದ್ದರೆ, ಹೋರಾಟಕ್ಕೆ ಹಿನ್ನಡೆಯಾಗುವುದಿಲ್ಲ. ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಅಕ್ಟೋಬರ್ 14 ರಿಂದ ಬಸವಕಲ್ಯಾಣದಲ್ಲಿ ಕಲ್ಯಾಣಪರ್ವ ನಡೆಯಲಿದ್ದು, ಅಂತಿಮ ದಿನದಂದು ಬೃಹತ್ ರ್ಯಾಲಿ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...