alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ಧಗಂಗಾ ಶ್ರೀ ಕುರಿತು ಮಾತೆ ಮಹಾದೇವಿ ವಿವಾದಿತ ಹೇಳಿಕೆ

ಬಾಗಲಕೋಟೆ: ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರವಾಗಿ ಭಾರೀ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ, ಬಸವಧರ್ಮ ಪೀಠದ ಮಾತೆ ಮಹಾದೇವಿ ತುಮಕೂರು ಸಿದ್ಧಗಂಗಾ ಶ್ರೀಗಳ ಕುರಿತು ವಿವಾದಿತ ಹೇಳಿಕೆ ನೀಡಿದ್ದಾರೆ.

ಭಾರತ ರತ್ನ ಪ್ರಶಸ್ತಿ ಕೊಡಿಸುವ ಆಮಿಷವೊಡ್ಡಿದ್ದರಿಂದ ಸ್ವಾಮೀಜಿ ತಾವು ನೀಡಿದ್ದ ಹೇಳಿಕೆಯನ್ನೇ ತಿರುಚಿದ್ದಾರೆ ಎಂದು ಟೀಕಿಸಿದ್ದಾರೆ.

ಸಚಿವ ಎಂ.ಬಿ. ಪಾಟೀಲ್ ಭೇಟಿಯ ಸಂದರ್ಭದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸ್ವಾಮೀಜಿ ಬೆಂಬಲಿಸುವ ಮಾತುಗಳನ್ನಾಡಿದ್ದು, ನಂತರದಲ್ಲಿ ಪ್ರಶಸ್ತಿ ಆಮಿಷ ಬಂದ ಕಾರಣ, 2 ಸಲ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ ಎಂದು ದೂರಿದ್ದಾರೆ.

ಸಿದ್ಧಗಂಗಾ ಶ್ರೀಗಳಿಗೆ ವಯಸ್ಸಾಗಿದೆ. ನೆನಪಿನ ಶಕ್ತಿ ಉಳಿದಿಲ್ಲ. ಬೇಲಿಮಠದ ಶ್ರೀಗಳನ್ನೇ ಯಾರೆಂದು ಕೇಳಿದ್ದರು. ಅವರಿಗೆ ನೆನಪಿನ ಶಕ್ತಿ ಕಡಿಮೆಯಾಗಿದ್ದು, ಯಡಿಯೂರಪ್ಪ, ಸೋಮಣ್ಣನಂತಹವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸ್ವಾಮೀಜಿಗೆ ಭಾರತರತ್ನ ಪ್ರಶಸ್ತಿಯ ಆಮಿಷವೊಡ್ಡಿದ್ದು, ಇದನ್ನು ಶೀಘ್ರವೇ ಬಹಿರಂಗಪಡಿಸಲಾಗುವುದು ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...