alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳಗಾವಿ ಮೇಯರ್, ಉಪ ಮೇಯರ್ ಗೆ ನೋಟಿಸ್

belagavi

ಬೆಂಗಳೂರು: ಕನ್ನಡ ರಾಜ್ಯೋತ್ಸವ ದಿನದಂದು ಎಂ.ಇ.ಎಸ್. ಆಯೋಜಿಸಿದ್ದ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಬೆಳಗಾವಿ ಮೇಯರ್ ಹಾಗೂ ಉಪ ಮೇಯರ್ ಅವರಿಗೆ ರಾಜ್ಯ ಸರ್ಕಾರ ನೋಟಿಸ್ ಜಾರಿ ಮಾಡಿದೆ.

ಎಂ.ಇ.ಎಸ್. ನಿಂದ ಆಯೋಜಿಸಿದ್ದ ಕರಾಳ ದಿನಾಚರಣೆ ಕಾರ್ಯಕ್ರಮದಲ್ಲಿ ಮೇಯರ್ ಸರಿತಾ ಪಾಟೀಲ, ಉಪ ಮೇಯರ್ ಸಂಜಯ್ ಶಿಂಧೆ ಅವರು ಪಾಲ್ಗೊಂಡಿದ್ದರು. ಈ ಬಗ್ಗೆ ಕನ್ನಡ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿ, ಪಾಲಿಕೆ ಮೇಯರ್, ಉಪ ಮೇಯರ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಪಾಲಿಕೆಯನ್ನು ಸೂಪರ್ ಸೀಡ್ ಮಾಡಬೇಕೆಂಬ ಒತ್ತಾಯ ಕೂಡ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಸರ್ಕಾರ ಜಿಲ್ಲಾಧಿಕಾರಿಯಿಂದ ವರದಿ ಪಡೆದುಕೊಂಡು ನೋಟಿಸ್ ಜಾರಿ ಮಾಡಿದೆ.

ನಗರಾಭಿವೃದ್ಧಿ ಇಲಾಖೆಯಿಂದ ನೋಟಿಸ್ ಜಾರಿ ಮಾಡಿದ್ದು, ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬಾರದೇಕೆ ಎಂದು ಪ್ರಶ್ನಿಸಲಾಗಿದೆ. 1 ವಾರದೊಳಗೆ ನೋಟಿಸ್ ಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...