alex Certify
ಕನ್ನಡ ದುನಿಯಾ       Mobile App
       

Kannada Duniya

ಕರಾಟೆಯಲ್ಲಿ ಚಿನ್ನದ ಪದಕ ಗೆದ್ದ ಮೇಯರ್

ಮಂಗಳೂರು: ಮಂಗಳೂರು ಮೇಯರ್ ಕವಿತಾ ಸನಿಲ್ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ 65 ಕೆ.ಜಿ. ಮೇಲಿನ ಮಹಿಳಾ ವಿಭಾಗದ ಬ್ಲ್ಯಾಕ್ ಬೆಲ್ಟ್ ಕುಮಿಟೆ ವಿಭಾಗದಲ್ಲಿ ಅವರು ಚಿನ್ನದ ಪದಕ ಗಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಪಂದ್ಯಾವಳಿ ಉದ್ಘಾಟನೆಯ ಸಂದರ್ಭದಲ್ಲಿ ಮೇಯರ್ ಕವಿತಾ ಅವರಿಗೆ ತಮಾಷೆಯಿಂದ ಪಂಚ್ ನೀಡಿದ್ದು ಭಾರೀ ಸುದ್ದಿಯಾಗಿತ್ತು.

ಈ ಪಂದ್ಯಾವಳಿಯಲ್ಲಿ ಕವಿತಾ ಅವರು ಚಿನ್ನದ ಪದಕ ಗೆಲ್ಲುವ ಮೂಲಕ ಗಮನ ಸೆಳೆದಿದ್ದಾರೆ. ಕರಾಟೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದ ಅವರು ಚುನಾವಣೆ ರಾಜಕೀಯ, ಸಂಸಾರದ ಜವಾಬ್ದಾರಿಯ ನಡುವೆಯೂ ಮತ್ತೆ ಚಾಂಪಿಯನ್ ಆಗುವ ಮೂಲಕ ಗಮನ ಸೆಳೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...