alex Certify
ಕನ್ನಡ ದುನಿಯಾ       Mobile App
       

Kannada Duniya

ನಟ ಮಯೂರ್ ಪಟೇಲ್ ಅರೆಸ್ಟ್

mayur

ಬೆಂಗಳೂರು: ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಕೇಸು ದಾಖಲಾಗಿದ್ದು, ಈ ಕಾರಣಕ್ಕಾಗಿ ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಗೌರಿಬಿದನೂರಿನ ಸೆಲ್ವಕುಮಾರ್ ಎಂಬುವವರಿಗೆ 5 ಲಕ್ಷ ರೂ ಕೊಡಬೇಕಿದ್ದ ನಟ, ನಿರ್ಮಾಪಕ ಮದನ್ ಪಟೇಲ್ ಅವರ ಪುತ್ರ ಮಯೂರ್ ಪಟೇಲ್ ಅವರು ಹಣ ನೀಡದೇ ಸತಾಯಿಸಿದ್ದರೆನ್ನಲಾಗಿದೆ. ಕೊನೆಗೆ 5 ಲಕ್ಷ ರೂ. ಚೆಕ್ ಕೊಟ್ಟಿದ್ದಾರಾದರೂ ಖಾತೆಯಲ್ಲಿ ಹಣವಿಲ್ಲದ ಕಾರಣ ಚೆಕ್ ಬೌನ್ಸ್ ಆಗಿತ್ತು. ಈ ಬಗ್ಗೆ ಸೆಲ್ವಕುಮಾರ್ ದೊಡ್ಡ ಬಳ್ಳಾಪುರದಲ್ಲಿ ದೂರು ದಾಖಲಿಸಿದ್ದು, ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಬಂಧನಕ್ಕೆ ವಾರೆಂಟ್ ಜಾರಿ ಮಾಡಿತ್ತು.

ಹಲಸೂರು ಠಾಣೆ ಪೊಲೀಸರು ಮಯೂರ್ ಪಟೇಲ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಮಯೂರ್ ಪಟೇಲ್ 5 ಲಕ್ಷ ರೂ. ಹಣ ಪಡೆದುಕೊಂಡು ವಾಪಸ್ ಕೊಡದ ಕಾರಣ ಸೆಲ್ವಕುಮಾರ್ ದೂರು ದಾಖಲಿಸಿದ್ದರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...