alex Certify
ಕನ್ನಡ ದುನಿಯಾ       Mobile App
       

Kannada Duniya

ಅತೃಪ್ತರ ನೇತೃತ್ವ ವಹಿಸಿದ್ರಾ ಎಂ.ಬಿ. ಪಾಟೀಲ್…?

ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾದ ಬೆನ್ನಲ್ಲೇ ಭಿನ್ನಮತ ಭುಗಿಲೆದ್ದಿದ್ದು, ಸಚಿವ ಸ್ಥಾನ ವಂಚಿತ ಶಾಸಕರು ಸಭೆ ಮೇಲೆ ಸಭೆ ನಡೆಸುತ್ತಿದ್ದು, ಮುಂದೆ ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಬುಧವಾರ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ್ದ ಅತೃಪ್ತ ಶಾಸಕರು, ಇಂದು ಮಾಜಿ ಸಚಿವ ಎಂ.ಬಿ. ಪಾಟೀಲರ ಸದಾಶಿವನಗರದ ಮನೆಯಲ್ಲಿ ಚರ್ಚೆ ನಡೆಸಿದ್ದಾರೆ.

ಸತತ ನಾಲ್ಕು ಗಂಟೆಗಳ ಕಾಲ ಎಂ.ಬಿ. ಪಾಟೀಲರ ನೇತೃತ್ವದಲ್ಲಿ ಈ ಸಭೆ ನಡೆದಿದೆ ಎನ್ನಲಾಗಿದ್ದು, ಸತೀಶ್ ಜಾರಕಿಹೊಳಿ, ಎಂಟಿಬಿ ನಾಗರಾಜ್, ರೋಶನ್ ಬೇಗ್, ಡಾ. ಸುಧಾಕರ್, ಪ್ರತಾಪ್ ಗೌಡ ಪಾಟೀಲ್, ಭೀಮಾ ನಾಯಕ್ ಮೊದಲಾದವರು ಸಭೆಯಲ್ಲಿ ಪಾಲ್ಗೊಂಡಿದ್ದಾರೆಂದು ತಿಳಿದುಬಂದಿದೆ.

ಎರಡು ದಿನ ಕಾದು ನೋಡುವ ನಿರ್ಧಾರಕ್ಕೆ ಈ ಶಾಸಕರುಗಳು ಬಂದಿದ್ದಾರೆ ಎನ್ನಲಾಗುತ್ತಿದ್ದು, ಪಕ್ಷದ ನಾಯಕರು ಯಾವುದೇ ಭರವಸೆ ನೀಡದಿದ್ದರೆ ಮುಂದೆ ಕೈಗೊಳ್ಳಬೇಕಾದ ತೀರ್ಮಾನಗಳನ್ನು ನಂತರ ನಿರ್ಧರಿಸಲಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...