alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾಮಯ್ಯನವರ ಮುಂದೆ ಕಣ್ಣೀರಿಟ್ಟ ಮಾಜಿ ಸಚಿವ

ಬುಧವಾರದಂದು ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾಗಿದ್ದು, ಕಾಂಗ್ರೆಸ್ ನ ಹಲವು ಹಿರಿಯ ನಾಯಕರು ಸಚಿವ ಸ್ಥಾನ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಪ್ರತಿಭಟನೆಯನ್ನು ನಡೆಸಿದ್ದಾರೆ.

ಈ ಮಧ್ಯೆ, ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ತಪ್ಪಿದ್ದು, ಅವರ ಬೆಂಬಲಿಗರಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದೆ.

ಬುಧವಾರದಂದು ಎಂ.ಬಿ. ಪಾಟೀಲ್ ಅವರ ಸದಾಶಿವನಗರ ಬಂಗಲೆ ಮುಂದೆ ಜಮಾಯಿಸಿದ್ದ ಬೆಂಬಲಿಗರು, ಪಾಟೀಲರನ್ನು ಭೇಟಿಯಾಗಲು ಬಂದಿದ್ದ ಕೃಷ್ಣಭೈರೇಗೌಡ, ಕೆ.ಜೆ. ಜಾರ್ಜ್ ಸೇರಿದಂತೆ ಹಲವು ನಾಯಕರಿಗೆ ಮುತ್ತಿಗೆ ಹಾಕಿದ್ದಾರೆ.

ತಮಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಪ್ರತಿಕ್ರಿಯಿಸಿದ್ದ ಎಂ.ಬಿ. ಪಾಟೀಲ್, ಕೊನೆಯ ಕ್ಷಣದಲ್ಲಿ ತಮಗೆ ಅವಕಾಶ ತಪ್ಪಲು ಏನು ಕಾರಣವೆಂಬುದು ತಿಳಿದುಬಂದಿಲ್ಲ ಎಂದಿದ್ದರು. ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ ಎಂ.ಬಿ. ಪಾಟೀಲ್ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟಿದ್ದಾರೆಂದು ತಿಳಿದುಬಂದಿದೆ.

ಸಮಾಜಕ್ಕಾಗಿ, ಪಕ್ಷಕ್ಕಾಗಿ ಶ್ರಮಿಸಿದ ತಮ್ಮನ್ನು ಪಕ್ಷ ಕಡೆಗಣಿಸಿದೆ ಎಂದು ಹೇಳಿದ ಎಂ.ಬಿ. ಪಾಟೀಲ್ ಇದು ಎಷ್ಟು ಸರಿ ಎಂದು ಪ್ರಶ್ನಿಸಿದರೆನ್ನಲಾಗಿದ್ದು, ಬಳಿಕ ಪಾಟೀಲರನ್ನು ಸಮಾಧಾನಪಡಿಸಿದ ಸಿದ್ದರಾಮಯ್ಯ, ಹೈಕಮಾಂಡ್ ಜೊತೆ ಚರ್ಚೆ ನಡೆಸುವ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...