alex Certify
ಕನ್ನಡ ದುನಿಯಾ       Mobile App
       

Kannada Duniya

ಕೊನೆ ಶ್ರಾವಣ ಶನಿವಾರ: ಮೇಲುಕೋಟೆ ಚೆಲುವನಾರಾಯಣನ ದರ್ಶನಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ

ಮೇಲುಕೋಟೆ: ಇಂದು ಕೊನೆಯ ಶ್ರಾವಣ ಶನಿವಾರ. ಈ ಹಿನ್ನಲೆಯಲ್ಲಿ ನಾಡಿನಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಶ್ರಾವಣ ಶನಿವಾರ ನಿಮ್ಮಿತ್ತ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದರ್ಶನಕ್ಕೆ ಸಾವಿರಾರು ಭಕ್ತರು ಹರಿದುಬರುತ್ತಿದ್ದಾರೆ. ಚೆಲುವನಾರಾಯಣನ ಸನ್ನಿಧಾನದಲ್ಲಿ ಇಂದು ಹಲವಾರು ವಿಶೇಷ ಪೂಜಾ ವಿಧಿ-ವಿಧಾನಗಳು ನೆರವೇರಲಿದ್ದು, ಇಡೀ ದಿನ ದೇವಾಲಯದ ಬಾಗಿಲು ತೆರೆದಿಡಲು ನಿರ್ಧರಿಸಲಾಗಿದೆ.

ದೇವರ ದರ್ಶನಕ್ಕಾಗಿ ಮುಂಜಾನೆಯಿಂದಲೇ ಭಕ್ತ ಸಾಗರ ದೇವಾಲಯಕ್ಕೆ ಹರಿದುಬರುತ್ತಿದ್ದು, ಭಕ್ತರ ಅನುಕೂಲಕ್ಕಾಗಿ ಇಂದು ರಾತ್ರಿ ಒಂಭತ್ತು ಗಂಟೆಯವರೆಗೂ ದೇವಾಲಯದ ಬಾಗಿಲು ತೆರೆದಿಡಲಾಗುತ್ತಿದೆ. ಒಂದು ವೇಳೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೆ ರಾತ್ರಿ ಒಂಭತ್ತು ಗಂಟೆಯ ನಂತರವೂ ಚೆಲುವನಾರಾಯಣಸ್ವಾಮಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ದೇವಾಲಯದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...