alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಧಾನ ಸಭೆ ಯಶಸ್ವಿ: ಮೆಟ್ರೋ ಸಂಚಾರ ಶುರು

metro-metro-dd

ಅಹೋರಾತ್ರಿಯಿಂದ ಮೆಟ್ರೋ ಸಿಬ್ಬಂದಿ ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ. ಬಿ.ಎಂ.ಆರ್.ಸಿ.ಎಲ್. ಎಂಡಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ತಕ್ಷಣದಿಂದಲೇ ರೈಲು ಸಂಚಾರ ಶುರುವಾಗಿದೆ.

ಸಂಧಾನ ಸಭೆಯಲ್ಲಿ ಶಾಸಕ ಹ್ಯಾರಿಸ್ ಹಾಗೂ ಪೂರ್ವ ವಲಯ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಪಾಲ್ಗೊಂಡಿದ್ದರು. ಸಭೆ ಬಳಿಕ ಮಾತನಾಡಿದ ಶಾಸಕರು, ಒಂದು ವಾರದೊಳಗೆ ಬೇಡಿಕೆ ಈಡೇರಿಸುವ ಭರವಸೆ ನೀಡಿರುವುದಾಗಿ ಹೇಳಿದ್ದಾರೆ. ಒಂದು ವಾರದೊಳಗೆ ತನಿಖೆ ನಡೆಯಲಿದೆ ಎಂದು ನಿಂಬಾಳ್ಕರ್ ಹೇಳಿದ್ದಾರೆ

ಬಂಧಿಸಲಾಗಿರುವ  6 ಮಂದಿ ಮೆಟ್ರೋ ಸಿಬ್ಬಂದಿಯನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ, ಅಹೋರಾತ್ರಿಯಿಂದ ಮೆಟ್ರೋ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದರು. ಮೆಟ್ರೋ ಕಾರ್ಮಿಕರು ಮತ್ತು ಸಿಬ್ಬಂದಿ ಪ್ರತಿಭಟನೆ ನಡೆಸಿದ್ದರಿಂದ ಮೆಟ್ರೋ ಸಂಚಾರ ಬಂದ್ ಆಗಿತ್ತು. ಇದ್ರಿಂದ ಪ್ರಯಾಣಿಕರು ಪರದಾಡುವಂತಾಗಿತ್ತು. ಕೆ.ಎಸ್.ಐ.ಎಸ್.ಎಫ್. ಪೊಲೀಸ್ ಮತ್ತು ಮೆಟ್ರೋ ಸಿಬ್ಬಂದಿ ನಡುವೆ ನಡೆದ ಗಲಾಟೆಗೆ ಸಂಬಂಧಿಸಿದಂತೆ 6 ಮಂದಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಿಡುಗಡೆ ಮಾಡಬೇಕೆಂದು ಪಟ್ಟು ಹಿಡಿದಿರುವ ಮೆಟ್ರೋ ಸಿಬ್ಬಂದಿ ಪ್ರತಿಭಟನೆ ಕೈಗೊಂಡಿದ್ದರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...