alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಪರಮೇಶ್ವರ್ ನಾಯ್ಕ್ ಬೆಂಗಾವಲು ಪಡೆ ಸಿಬ್ಬಂದಿ ಸಾವು

accident-741lkjop

ದಾವಣಗೆರೆ: ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ಕಾರ್ಮಿಕ ಸಚಿವ ಪರಮೇಶ್ವರ ನಾಯ್ಕ್ ಅವರ ಬೆಂಗಾವಲು ವಾಹನದ ಸಿಬ್ಬಂದಿ ಅಪಘಾತದಲ್ಲಿ ಮೃತಪಟ್ಟವರು.

ಪರಮೇಶ್ವರ ನಾಯ್ಕ್ ಅವರು ಉಚ್ಚಂಗಿ ದುರ್ಗಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಹರಪನಹಳ್ಳಿ ತಾಲ್ಲೂಕಿನ ಸಿಂಗಾರವ್ವ ತೋಟದ ಸಮೀಪ ಬೆಂಗಾವಲು ಪಡೆಯ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಸಚಿವರ ಕಾರಿಗೆ ಬೆಂಗಾವಲು ಒದಗಿಸಿದ್ದ ಪೊಲೀಸ್ ವಾಹನಕ್ಕೆ ಹಿಂದಿನಿಂದ ಖಾಸಗಿ ಬಸ್ ಡಿಕ್ಕಿ ಹೊಡೆದು, ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ವೆಂಕಟೇಶ್, ಮುಖ್ಯಪೇದೆ ನಾಗರಾಜು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ಸೇರಿಸಲಾಗಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸಚಿವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ನಿಮಿತ್ತ ಉಚ್ಚಂಗಿ ದುರ್ಗಕ್ಕೆ ಹೊರಟಿದ್ದರು. ಆಗ ಬಸ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...