alex Certify
ಕನ್ನಡ ದುನಿಯಾ       Mobile App
       

Kannada Duniya

ಖಾತೆ ಕ್ಯಾತೆ ಬಳಿಕ ಈಗ ಮಂತ್ರಿಗಿರಿಗಾಗಿ ಪೈಪೋಟಿ

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅತ್ಯಧಿಕ ಸ್ಥಾನಗಳು ಲಭಿಸಿದರೂ ಕೂಡ, ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಬೇಕೆಂಬ ಕಾರಣಕ್ಕಾಗಿ ಅಸ್ತಿತ್ವಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರದ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ.

ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಿ ವಾರಗಳೇ ಕಳೆದರೂ ಸಚಿವ ಸಂಪುಟ ಇನ್ನೂ ರಚನೆಯಾಗಿಲ್ಲ. ಪ್ರಮುಖ ಖಾತೆಗಳಿಗಾಗಿ ಉಭಯ ಪಕ್ಷಗಳ ನಾಯಕರು ಪಟ್ಟು ಹಿಡಿದಿದ್ದೇ ಇದಕ್ಕೆ ಕಾರಣ.

ಇದೀಗ ಆ ಸಮಸ್ಯೆಯೂ ಬಗೆಹರಿದಿದ್ದು, ಹಣಕಾಸು, ಇಂಧನ, ಲೋಕೋಪಯೋಗಿಯಂತಹ ಪ್ರಮುಖ ಖಾತೆಗಳು ಜೆಡಿಎಸ್ ಪಾಲಾಗಿದ್ದರೆ, ಗೃಹ, ಕಂದಾಯ, ಜಲಸಂಪನ್ಮೂಲದಂತಹ ಪ್ರಮುಖ ಖಾತೆಗಳು ಕಾಂಗ್ರೆಸ್ ಗೆ ಲಭಿಸಿವೆ.

ಬುಧವಾರದಂದು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆಂದು ಹೇಳಲಾಗಿದ್ದು, ಈ ಮಧ್ಯೆ ಎರಡೂ ಪಕ್ಷಗಳಲ್ಲಿ ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ ನಡೆದಿದೆ. ಸಚಿವ ಸ್ಥಾನ ವಂಚಿತ ಶಾಸಕರಿಗೆ ನಿಗಮ-ಮಂಡಳಿಗಳಲ್ಲಿ ಅವಕಾಶ ಕಲ್ಪಿಸಿಕೊಡುವುದಾಗಿ ನಾಯಕರು ಹೇಳುತ್ತಿದ್ದರೂ ತಮಗೆ ಸಚಿವ ಸ್ಥಾನವೇ ಬೇಕೆಂದು ಒತ್ತಡ ಹೇರುತ್ತಿರುವುದು ತಲೆನೋವಾಗಿ ಪರಿಣಮಿಸಿದೆ. ಸಚಿವ ಸಂಪುಟ ರಚನೆಯ ಬಳಿಕ ಅವಕಾಶ ವಂಚಿತರು ಎಲ್ಲಿ ಬಂಡಾಯ ಏಳುವರೋ ಎಂಬ ಆತಂಕವೂ ಕಾಂಗ್ರೆಸ್-ಜೆಡಿಎಸ್ ನಾಯಕರನ್ನು ಕಾಡುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...