alex Certify
ಕನ್ನಡ ದುನಿಯಾ       Mobile App
       

Kannada Duniya

9 ಸಂಪುಟ, 4 ಮಂದಿ ರಾಜ್ಯ ಸಚಿವರ ಪ್ರಮಾಣ

23 Mar 2009, India --- The Indo-Saracenic style Vidhana Soudha (Karnataka State Legislative Assembly) in Bangalore, Karnataka, India, Asia --- Image by © Stuart Forster/Robert Harding World Imagery/Corbis

ಬೆಂಗಳೂರು: ಬಹುನಿರೀಕ್ಷೆಯ ಸಚಿವ ಸಂಪುಟ ಪುನಾರಚನೆ ಕೊನೆಗೂ ಪೂರ್ಣಗೊಂಡಿದ್ದು, ತೀವ್ರ ಗೊಂದಲ, ಆಕಾಂಕ್ಷಿಗಳ ಆಕ್ರೋಶ, ನೂತನ ಸಚಿವರ ಸಂಭ್ರಮಾಚರಣೆ ನಡುವೆಯೇ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರು ಪ್ರಮಾಣ ಸ್ವೀಕರಿಸಿದ್ದಾರೆ.

 

ಸಂಪುಟ ದರ್ಜೆ ಸಚಿವರಾಗಿ ಕಾಗೋಡು ತಿಮ್ಮಪ್ಪ, ಕೆ.ಆರ್.ರಮೇಶ್ ಕುಮಾರ್, ಬಸವರಾಜ ರಾಯರೆಡ್ಡಿ, ತನ್ವೀರ್ ಸೇಠ್, ಹೆಚ್.ವೈ.ಮೇಟಿ, ಎಸ್.ಎಸ್.ಮಲ್ಲಿಕಾರ್ಜುನ್, ಎ.ಆರ್ ಸೀತಾರಾಂ, ಸಂತೋಷ್ ಲಾಡ್, ರಮೇಶ್ ಜಾರಕಿಹೊಳಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ರುದ್ರಪ್ಪ ಲಮಾಣಿ ಹಾಗೂ ಪ್ರಮೋದ್ ಮಧ್ವರಾಜ್ ರಾಜ್ಯ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ.

 

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ 9 ಮಂದಿ ಸಂಪುಟ ದರ್ಜೆ ಸಚಿವರು ಹಾಗೂ 4 ರಾಜ್ಯ ಸಚಿವರಿಗೆ ರಾಜ್ಯಪಾಲ ವಜೂಭಾಯ್ ವಾಲಾ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವು ಪ್ರಮುಖರು ಇದ್ದರು. ನೂತನ ಸಚಿವರ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...