alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸ್ಥಾನಾಕಾಂಕ್ಷಿ ಕಾಂಗ್ರೆಸ್ ಶಾಸಕರಿಗೆ ಕಾಡುತ್ತಿದೆ ಹೊಸ ಆತಂಕ

ಮೈತ್ರಿಕೂಟ ಸರ್ಕಾರದಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದ ಕಾಂಗ್ರೆಸ್ ಶಾಸಕರಿಗೆ, ಗುರುವಾರದಂದು ರಾಜ್ಯ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಘೋಷಿಸಿರುವುದರಿಂದ ಹೊಸ ಆತಂಕ ಶುರುವಾಗಿದೆ.

ಆಷಾಢ ಮಾಸದ ಕಾರಣ ಹೇಳಿ ಇದುವರೆಗೂ ಸಚಿವ ಸಂಪುಟ ವಿಸ್ತರಣೆಯನ್ನು ಮುಂದೂಡಿಕೊಂಡು ಬಂದಿದ್ದ ಕಾಂಗ್ರೆಸ್ ನಾಯಕರು, ಇದೀಗ ಸ್ಥಳೀಯ ಸಂಸ್ಥೆಯ ಚುನಾವಣೆಯ ನೆಪವೊಡ್ಡಿ ಮತ್ತೊಂದು ತಿಂಗಳು ಸಂಪುಟ ವಿಸ್ತರಣೆಯನ್ನು ಮುಂದೂಡಬಹುದೆಂಬ ಚಿಂತೆ ಸಚಿವ ಸ್ಥಾನಾಕಾಂಕ್ಷಿ ಶಾಸಕರನ್ನು ಕಾಡುತ್ತಿದೆ.

ಈ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನದ ಬಳಿಕ ಬೆಂಗಳೂರಿಗೆ ಆಗಮಿಸಲಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರ ಮೂಲಕ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಶಾಸಕರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...