alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಅರಣ್ಯ ಇಲಾಖೆಯ 3085 ಹೊಸ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ.

ಕಾನೂನು ಸಚಿವ ಟಿ.ಬಿ. ಜಯಚಂದ್ರ ವಿಧಾನ ಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಅರಣ್ಯ ಇಲಾಖೆಯಲ್ಲಿ 3085 ಹುದ್ದೆಗಳನ್ನು ಹೊಸದಾಗಿ ಸೃಷ್ಠಿಸಿದ್ದು, ಸರ್ಕಾರದಿಂದ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೆ.ಟಿ. ಶ್ರೀಕಂಠೇಗೌಡ ಅವರ ಪ್ರಶ್ನೆಗೆ ಅರಣ್ಯ ಸಚಿವ ರಮಾನಾಥ ರೈ ಅವರ ಪರವಾಗಿ ಟಿ.ಬಿ. ಜಯಚಂದ್ರ ಉತ್ತರ ನೀಡಿ, ಮುಂದಿನ 5 ವರ್ಷಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿ ನಡೆಸಲಾಗುವುದು. 143 ಉಪ ವಲಯ ಅರಣ್ಯಾಧಿಕಾರಿ, 119 ಅರಣ್ಯ ರಕ್ಷಕರ ಹುದ್ದೆಗಳಿಗೆ ಈ ವರ್ಷವೇ ನೇಮಕಾತಿ ನಡೆಯಲಿದೆ ಎಂದು ಹೇಳಿದ್ದಾರೆ.

ಬಂಡೀಪುರ ರಾಷ್ಟ್ರೀಯ ಉದ್ಯಾನಕ್ಕೆ 20, ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ 20 ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರವೇ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...