alex Certify
ಕನ್ನಡ ದುನಿಯಾ       Mobile App
       

Kannada Duniya

ತಾವು ಎರಡು ವರ್ಷ ಮಾತ್ರ ಮಂತ್ರಿ ಎಂದು ಹೇಳಿದ ಸಚಿವ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಈ ಸರ್ಕಾರ ಬಹುಕಾಲ ನಡೆಯದು ಎಂದು ವಿಪಕ್ಷ ನಾಯಕರು ಹೇಳುತ್ತಿದ್ದಾರೆ.

ಇದಕ್ಕೆ ಪೂರಕವೆಂಬಂತೆ ಸಚಿವ ಸ್ಥಾನ ವಂಚಿತ ಶಾಸಕರುಗಳು ಹಲವು ಸಭೆಗಳನ್ನು ನಡೆಸುವ ಮೂಲಕ ತಮ್ಮ ಅತೃಪ್ತಿಯನ್ನು ಹೊರಹಾಕಿದ್ದರು. ಅವರುಗಳೊಂದಿಗೆ ಮಾತನಾಡಿದ್ದ ಕಾಂಗ್ರೆಸ್ ಹೈಕಮಾಂಡ್ ನಾಯಕರು, ಎರಡು ವರ್ಷಗಳ ಬಳಿಕ ಹಾಲಿ ಸಚಿವರನ್ನು ಕೈ ಬಿಟ್ಟು ಬೇರೆಯವರಿಗೆ ಅವಕಾಶ ಕಲ್ಪಿಸಿಕೊಡುವುದಾಗಿ ಹೇಳಿದ್ದರು.

ಇದೀಗ ಸಚಿವ ಪುಟ್ಟರಂಗಶೆಟ್ಟಿ ಈ ಸೂತ್ರವನ್ನು ಬಹಿರಂಗವಾಗಿಯೇ ಬಿಚ್ಚಿಟ್ಟಿದ್ದು, ತಾವು ಎರಡು ವರ್ಷಗಳ ಕಾಲ ಮಾತ್ರ ಮಂತ್ರಿಯಾಗಲಿದ್ದು, ಬಳಿಕ ಹನೂರು ಕ್ಷೇತ್ರದ ಶಾಸಕ ನರೇಂದ್ರ ಮಂತ್ರಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಚಾಮರಾಜ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪುಟ್ಟರಂಗಶೆಟ್ಟಿ, ಸಚಿವ ಸ್ಥಾನ ನೀಡುವ ಮೊದಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯವನ್ನು ತಿಳಿಸಿದ್ದು, ಇದಕ್ಕೆ ಒಪ್ಪಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...