alex Certify
ಕನ್ನಡ ದುನಿಯಾ       Mobile App
       

Kannada Duniya

ವರದಿ ಬಳಿಕ ಬೆಳೆ ಹಾನಿಗೆ ಪರಿಹಾರ-ಶಿವಶಂಕರ ರೆಡ್ಡಿ

ಶಿವಮೊಗ್ಗ: ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿಗೆ ಸಂಬಂಧಿಸಿದಂತೆ ವರದಿ ಬಂದ ನಂತರ ಬೆಳೆ ಪರಿಹಾರ ರೈತರಿಗೆ ನೀಡಲಾಗುವುದು ಎಂದು ಕೃಷಿ ಮತ್ತು ತೋಟಗಾರಿಕೆ ಸಚಿವ ಶಿವಶಂಕರರೆಡ್ಡಿ ತಿಳಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಹೇರಳವಾಗಿ ಸುರಿದ ಮಳೆಯಿಂದಾಗಿ ಬೆಳೆ ನಷ್ಟ ಸಂಭವಿಸಿದೆ. ಬೆಳೆ ನಷ್ಟಕ್ಕೆ ಪರಿಹಾರ ವಿತರಣೆ ಮಾಡಬಹುದು. ಜಿಲ್ಲಾಡಳಿತ ಬೆಳೆ ನಷ್ಟ ಕುರಿತು ವರದಿ ಸಲ್ಲಿಸಬೇಕಿದೆ ಎಂದರು.

ರಾಜ್ಯದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನಿದೆ. ರಾಜ್ಯದ ಯಾವುದೇ ಜಿಲ್ಲೆಗಳಲ್ಲೂ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಕಂಡುಬಂದಿಲ್ಲ. ಸಾಕಷ್ಟು ದಾಸ್ತಾನು ಹೊಂದಲಾಗಿದೆ ಎಂದು ತಿಳಿಸಿದರು.

ಅಡಿಕೆ ಕೊಳೆರೋಗದಿಂದಾಗಿ ಬೆಳೆಹಾನಿ ಉಂಟಾಗಿದ್ದರೆ ನಷ್ಟ ಪರಿಹಾರ ಕೊಡಬಹುದು. ಹವಾಮಾನ ವೈಪರಿತ್ಯದಿಂದ ಆಗುವ ಬೆಳೆನಷ್ಟಕ್ಕೆ ಪರಿಹಾರ ಕೊಡುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರದಿಂದಲೂ ಪರಿಹಾರ ಬಿಡುಗಡೆಯಾಗಬೇಕು. ಅಧಿಕಾರಿಗಳು ನೀಡುವ ವರದಿ ಆಧಾರದ ಮೇಲೆ ಪರಿಹಾರ ನೀಡಲಾಗುವುದು ಎಂದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...