alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸ್ಥಾನಕ್ಕೆ ಪಟ್ಟು ಹಿಡಿದ ಶಾಸಕ ಎಂಟಿಬಿ ನಾಗರಾಜ್

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಇನ್ನೇನು ಎಲ್ಲವೂ ಸರಿಯಾಗಿದೆ ಎನ್ನುತ್ತಿದ್ದಂತೆ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನ ಹಲವು ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಕಾಂಗ್ರೆಸ್ ನ ಕೆಲ ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ತಮಗೆ ಸಚಿವ ಸ್ಥಾನವನ್ನು ನೀಡಲೇಬೇಕು ಎಂದು ಬಿಗಿಪಟ್ಟು ಹಿಡಿದು ಕುಳಿತಿದ್ದಾರೆ.

ಈ ಹಿನ್ನಲೆಯಲ್ಲಿ ಸಚಿವರಾದ ಡಿ.ಕೆ. ಶಿವಕುಮಾರ್ ಹಾಗೂ ಜಮೀರ್ ಅಹ್ಮದ್, ಶಾಸಕ ನಾಗರಾಜ್ ಮನೆಗೆ ತೆರಳಿ ಅವರನ್ನು ಸಮಾಧಾನಪಡಿಸುವ ಯತ್ನ ನಡೆಸಿದ್ದಾರೆ. ಉಭಯ ಸಚಿವರ ಸಂಧಾನಕ್ಕೂ ಬಗ್ಗದ ಶಾಸಕ ಸಚಿವ ಸ್ಥಾನ ನೀಡಲೇಬೇಕೆಂದು ಹಠ ಹಿಡಿದು ಕುಳಿತಿದ್ದಾರೆನ್ನಲಾಗಿದೆ.

ಈ ಬಗ್ಗೆ ನಾಯಕರ ಬಳಿ ತಮ್ಮ ಅಸಮಾಧಾನ ಹೊರಹಾಕಿರುವ ಶಾಸಕ ನಾಗರಾಜ್, ನಾನೆಲ್ಲೂ ಕಾಂಗ್ರೆಸ್ ಪಕ್ಷ ತೊರೆಯುವುದಾಗಿ ಹೇಳಿಕೆಗಳನ್ನು ನೀಡಿಲ್ಲ. ಆದರೆ ಪಕ್ಷದಲ್ಲಿ ನನ್ನನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಬೇಕಿದ್ದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಆದರೆ ಪಕ್ಷಕ್ಕಾಗಿ ಸಾಕಷ್ಟು ಕೆಲಸಗಳನ್ನು ಮಾಡಿರುವ ನನಗೆ ಮಂತ್ರಿಗಿರಿ ಕೊಡಲೇಬೇಕು ಎಂದು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...